ರಾಯಚೂರು ಡಿಸೆಂಬರ್ 31 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜನವರಿ 03 ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ನಿರ್ಗಮಿಸಿ, ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಏರಸ್ಟ್ರೀಪಗೆ 12.50ಕ್ಕೆ ಆಗಮಿಸುವರು. ಜಿಂದಾಲನಿಂದ 1.30ಕ್ಕೆ ಹೊರಟು 2 ಗಂಟೆಗೆ ಸಿಂಧನೂರಿನ ಸರ್ಕ್ಯೂಟ್ ಹೌಸ್ ಹತ್ತಿರದ ಹೆಲಿಪ್ಯಾಡಗೆ ಆಗಮಿಸುವರು. ಮಧ್ಯಾಹ್ನ 2 ಗಂಟೆ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಸಿಂಧನೂರ ಸರ್ಕ್ಯೂಟ್ ಹೌಸ್ ಹತ್ತಿರದ ಹೆಲಿಪ್ಯಾಡನಿಂದ ನಿರ್ಗಮಿಸಿ, 3.30ಕ್ಕೆ ಸಿಂಧನೂರು ತಾಲ್ಲೂಕಿನ ಸೋಮಲಾಪುರ ಗ್ರಾಮದ ಶ್ರೀ ಅಂಬಾಮಠದ ಆವರಣದಲ್ಲಿನ ಹೆಲಿಪ್ಯಾಡಗೆ ಆಗಮಿಸಿ, ಅಂಬಾಮಠದ ಆವರಣದಲ್ಲಿ ಸಿಂಧನೂರ ತಾಲೂಕಾಡಳಿತ, ತಾಲ್ಲೂಕು ಪಂಚಾಯತ್, ಧಾರ್ಮಿಕ ದತ್ತಿ ಇಲಾಖೆ ಹಾಗೂ ಶ್ರೀ ಅಂಬಾದೇವಿ ವ್ಯವಸ್ಥಾಪನಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಶ್ರೀ ಅಂಬಾ ಮಹೋತ್ಸವ-2026ರ ಜಾತ್ರಾ ಮಹೋತ್ಸವ, ಶ್ರೀ ಅಂಬಾದೇವಿ ಮಹಾರಥೋತ್ಸವ ಮತ್ತು ಜಂಬೂ ಸವಾರಿಗೆ ಚಾಲನೆ ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಸಂಜೆ 5 ಗಂಟೆಗೆ ಸೋಮಲಾಪುರ ಗ್ರಾಮದ ಶ್ರೀ ಅಂಬಾಮಠದ ಆವರಣದ ಹೆಲಿಪ್ಯಾಡನಿಂದ ನಿರ್ಗಮಿಸಿ, 5.30ಕ್ಕೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಏರಸ್ಟ್ರಿಪಗೆ ತೆರಳಿ, ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳಾದ ಕೆ.ಚಿರಂಜೀವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

