ಲಿಂಗಸಗೂರು : ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದ ಕಿಲ್ಲದಲ್ಲಿರುವ ಸಹನಾ ಶಾಲೆಯಲ್ಲಿ ಇಂದು ಹೊಸ ವರ್ಷವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಕೇಕ್ ಕತ್ತರಿಸುವುದರ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಕುರಿತು ಸಂಸ್ಥೆಯ ಅಧ್ಯಕ್ಷರು ಶ್ರೀಮತಿ ಇರ್ಫಾನಾ ಬೇಗಂ ಮಾತನಾಡಿ, ಪ್ರತಿ ಮಕ್ಕಳು ತಂದೆ-ತಾಯಿಯನ್ನು ಗೌರವಿಸಬೇಕು ಮತ್ತು ಪ್ರತಿಯೊಬ್ಬರು ತಂದೆ ತಾಯಿ ಮತ್ತು ಶಿಕ್ಷಕರ ಮಾತನ್ನು ತಪ್ಪದೇ ಪಾಲಿಸಬೇಕು ಎಂದು ಮಕ್ಕಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಲೈಬಾ, ಸಿಂಚನ, ಸಹನ, ಉಮೇರಾ, ಅಲಿಯ ಮತ್ತು ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿರಾದ ಪ್ರಿಯಾಂಕ, ಹೀ ನಾ ಬೇಗಮ್, ಕವಿತಾ ಮಾತನಾಡಿದರು. ಶಾಲೆಯ ಮುಖ್ಯ ಗುರುಗಳಾದ ಆದಪ್ಪ ಅವರು ಮಾತನಾಡಿ, ನಮ್ಮ ಶಾಲೆಯಲ್ಲಿ ಕಲಿಯುವಂತಹ ಮಕ್ಕಳು ಅತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ಸು ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಆಯಿಷಾ ಬೇಗಮ್, ನಿಲು ಬಾಯಿ , ಕಾವೇರಿ ಉಪಸ್ಥಿತರಿದ್ದರು . ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕಿಯಾದ ಅಸ್ಮಾ ಬೇಗಂ ನಿರೂಪಿಸಿದರು. ಕಾರ್ಯಕ್ರಮದ ನಂತರದಲ್ಲಿ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

