ರಾಯಚೂರು ಜನವರಿ 01 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರಪಾಲಿಕೆ ವ್ಯಾಪ್ತಿ ಪ್ರದೇಶದಲ್ಲಿ ಬರುವ ವಿಕಲಚೇತನರ ಅರ್ಹ ಫಲಾನುಭವಿಗಳಿಂದ ವಿವಿಧ ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವೈದ್ಯರಿಂದ ಪಡೆದ ಗುರುತಿನ ಚೀಟಿ/ಯು.ಡಿ.ಐ.ಡಿ ಕಾರ್ಡ, ಆಧಾರ ಕಾರ್ಡ, ಬಿ.ಪಿ.ಎಲ್ ರೇಷನ್ ಕಾರ್ಡ, ಗುರುತಿನ ಚೀಟಿ, ಪಾಸ್ ಫೋಟೋ ಸೈಜ್ ಫೋಟೋ-1, ವಿಕಲಚೇತನರ 1 ಭಾವಚಿತ್ರದೊಂದಿಗೆ ಜನವರಿ 15 ರೊಳಗಾಗಿ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ನೋಟಿಸ್ ಬೋರ್ಡ ನೋಡಬಹುದಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *