ರಾಯಚೂರು ಜನವರಿ 01 (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟದ ಭಾಗದ 08 ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳನ್ನು ಉತ್ತೇಜಿಸಿ ಪ್ರಚಾರ ಪಡಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಒಂದು ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿ ನೀಡಲು ಹಾಗೂ ಈ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಜಾಕೆಟ್ ಹಾಗೂ ಒಂದು ಜೊತೆ ಸ್ಪೋರ್ಟ್ಸ್ ಶೂ ಒದಗಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಜಿಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ-11 ಹಾಗೂ ಪಂಗಡದ-09 ಗುರಿಯನ್ನು ನಿಗಧಿಪಡಿಸಲಾಗಿದ್ದು, ಪರಿಶಿಷ್ಟ ಜಾತಿ-10 ಹಾಗೂ ಪಂಗಡದ-08 ಗುರಿಗಳು ಬಾಕಿ ಉಳಿದಿರುತ್ತವೆ.
ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 48 ವಯೋಮಿತಿಯೊಳಗಿರಬೇಕು. ಅರ್ಜಿಗಳನ್ನು ಕಚೇರಿಯಿಂದ ಪಡೆದು ಜನವರಿ 20ರೊಳಗಾಗಿ ಸಲ್ಲಿಸಬಹುದಾಗಿದೆ. ಅವಧಿ ಮುಂಗಿದ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ, ಗಣೇಶ ಗುಡಿ ಹತ್ತಿರ, ನಿಜಲಿಂಗಪ್ಪ ಕಾಲೋನಿ, ರಾಯಚೂರು ಜಿಲ್ಲೆ-584101, ದೂರವಾಣಿ ಸಂಖ್ಯೆ:08532200677, ಕಚೇರಿಯ ವೇಳೆಯಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ನಜೀರ ಆಮದ ಕನವಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *