ವಿಕಾಸಸೌಧದ ನನ್ನ ಕಚೇರಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಅನುದಾನದ ಅಡಿ ಕೈಗೊಳ್ಳಲಾಗಿರುವ ಯೋಜನೆಗಳ ಜಾರಿ ಹಾಗೂ ಕಾಮಾಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಯಿತು.
ಸಭೆಯ ಮುಖ್ಯಾಂಶಗಳು
✅2024–25ನೇ ಆರ್ಥಿಕ ವರ್ಷದಲ್ಲಿ, ಎಸ್‌ಸಿಪಿ–ಟಿಎಸ್‌ಪಿ ಕಾಯ್ದೆಯಡಿ ನಮ್ಮ ಇಲಾಖೆಯ ಮೂಲಕ ಸುಮಾರು 365 ಕೋಟಿರೂ.ವೆಚ್ಚದಲ್ಲಿ 3,388 ಪರಿಶಿಷ್ಟ ಜಾತಿ ರೈತ ಕುಟುಂಬಗಳು, 1,983 ಪರಿಶಿಷ್ಟ ಪಂಗಡದ ಒಟ್ಟು 5,371 ರೈತ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದೊಂದಿಗೆ ಕೊಳವೆಬಾವಿ ಸೌಲಭ್ಯವನ್ನು ಯಶಸ್ವಿಯಾಗಿ ಅಳವಡಿಸಿರುವ ಬಗ್ಗೆ ಮಾಹಿತಿ ಪಡೆಯಲಾಯಿತು.
✅2025–26ನೇ ಆರ್ಥಿಕ ವರ್ಷದಲ್ಲಿ ಎಸ್‌ಸಿಪಿ–ಟಿಎಸ್‌ಪಿ ಕಾಯ್ದೆಯಡಿ ಸುಮಾರು 520 ಕೋಟಿ ರೂ. ಮೀಸಲಿಟ್ಟಿದ್ದು, 3,939 ಪರಿಶಿಷ್ಟ ಜಾತಿ ಮತ್ತು 2383 ಪರಿಶಿಷ್ಟ ಪಂಗಡದ ಒಟ್ಟು 6,322 ರೈತ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದೊಂದಿಗೆ ಕೊಳವೆಬಾವಿ ಸೌಲಭ್ಯ ಒದಗಿಸಲು ನೀಡಿರುವ ಅನುಮೋದನೆಯ ಪ್ರಗತಿಯ ಬಗ್ಗೆ ಪರಿಶೀಲಿಸಲಾಯಿತು.
🫧2025–26ನೇ ವರ್ಷದಲ್ಲಿ ಎಸ್‌ಸಿಪಿ–ಟಿಎಸ್‌ಪಿ ಕಾಯ್ದೆಯಡಿ ಕೊಳವೆಬಾವಿಗಳ ಜೊತೆಗೆ ಅಂತರ್ಜಲ ಅಭಿವೃದ್ಧಿಗೊಳಿಸುವ ದೃಷ್ಟಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕೃಷಿ ಪ್ರದೇಶದಲ್ಲಿ ಜಲ ಸಂರಕ್ಷಣಾ ರಚನೆಗಳ (ಚೆಕ್ ಡ್ಯಾಮ್ , ಸಾಮೂಹಿಕ ಏತ ನೀರಾವರಿ ಯೋಜನೆ) ನಿರ್ಮಾಣ ಕಾರ್ಯಕ್ಕೆ ನೀಡಿರುವ ಆದ್ಯತೆಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
✅ಪ್ರಸ್ತುತ ಸಾಲಿನ ಅನುಮೋದಿತ ಯೋಜನೆಗಳ ಅನುಷ್ಠಾನ ಚುರುಕುಗೊಳಿಸಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದೊಂದಿಗೆ ಕೊಳವೆಬಾವಿ ಸೌಲಭ್ಯವನ್ನು ಒದಗಿಸುವ ಕಾರ್ಯವನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಬಿ.ಕೆ ಪವಿತ್ರ, ಉತ್ತರ ಹಾಗೂ ದಕ್ಷಿಣ ವಲಯದ ಮುಖ್ಯ ಅಭಿಯಂತರರು ಉಪಸ್ಥಿತರಿದ್ದರು.

