ಆಹಾರ ನಾಗರಿಕ ಸರಬರಾಜು ಮತ್ತುಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ತಾಲ್ಲೂಕಿನ ಗ್ರಾಮಗಳಿಗೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.

ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮ(ಎಸ್.ಟಿ. ಮೀಸಲಾತಿ), ಕೊಪ್ಪಳ ತಾಲ್ಲೂಕಿನ ಬೂದಗುಂಪಾ ಗ್ರಾಮ-2(ಸಾಮಾನ್ಯ) ಹಾಗೂ ಗಂಗಾವತಿ ತಾಲ್ಲೂಕಿನ ಈದ್ಗಾ ಕಾಲೋನಿ, ಗಂಗಾವತಿ (ಸಾಮಾನ್ಯ) ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅಧಿಸೂಚನೆ ಹೊರಡಿಸಿದ ದಿನಾಂಕದಿಂದ 30 ದಿನಗಳ ಒಳಗಾಗಿ ಸಂಬಂಧಿಸಿದ ಉಪನಿರ್ದೇಶಕರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕೊಪ್ಪಳ ಇಲ್ಲಿಗೆ ನಿಗದಿತ ನಮೂನೆಯೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *