­ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು 2026ರ ಜನವರಿ 3 ಹಾಗೂ 4ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಜನವರಿ 3ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ನಿರ್ಗಮಿಸಿ, ಬಳ್ಳಾರಿ ಜಿಲ್ಲೆಯ ಜಿಂದಾಲ್ ಏರಸ್ಟ್ರೀಪಗೆ 12.50ಕ್ಕೆ ಆಗಮಿಸುವರು. ಜಿಂದಾಲನಿಂದ 1.30ಕ್ಕೆ ಹೊರಟು 2 ಗಂಟೆಗೆ ಸಿಂಧನೂರಿನ ಸರ್ಕ್ಯೂಟ್ ಹೌಸ್ ಹತ್ತಿರದ ಹೆಲಿಪ್ಯಾಡಗೆ ಆಗಮಿಸುವರು. ಮಧ್ಯಾಹ್ನ 2 ಗಂಟೆಗೆ ಮುಖ್ಯಮಂತ್ರಿಗಳೊಂದಿಗೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಭಾಗವಹಿಸುವರು.

ಬಳಿಕ ಮಧ್ಯಾಹ್ನ 3.30ಕ್ಕೆ ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದ ಶ್ರೀ ಅಂಬಾಮಠ ಆವರಣದಲ್ಲಿ

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಶ್ರೀ ಅಂಬಾದೇವಿ ವ್ಯವಸ್ಥಾಪನಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶ್ರೀ ಅಂಬಾ ಮಹೋತ್ಸವ-2026ರ ಜಾತ್ರಾ ಮಹೋತ್ಸವ ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸಲಿದ್ದಾರೆ.

ಸಂಜೆ 6 ಗಂಟೆಗೆ ಜಿಲ್ಲೆಯ ಲಿಂಗಸುಗೂರಿನಲ್ಲಿ ತಾಲೂಕಿನ ವೀರಶೈವ ವಿದ್ಯಾವರ್ಧಕ ಸಂಘದಿಂದ ಏರ್ಪಡಿಸಲಾದ ಬೆಳ್ಳಿ ಸಂಭ್ರಮ-2026ರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ರಾಯಚೂರು ನಗರಕ್ಕೆ ಆಗಮಿಸಿ ರಾಯಚೂರಿನಲ್ಲಿ ವಾಸ್ತವ್ಯ ಮಾಡುವರು.

ಜನವರಿ 4ರ ಬೆಳಿಗ್ಗೆ 9 ಗಂಟೆಗೆ ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಯಚೂರು ಉತ್ಸವ ಅಂಗವಾಗಿ ಹಮ್ಮಿಕೊಳ್ಳಲಾದ ಕ್ರಿಕೇಟ್ ಟೂರ್ನಮೆಂಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 10 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಯಚೂರು ಉತ್ಸವ ಕುರಿತು ಜನಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆ ಮತ್ತು ಲೋಗೊ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ನಗರದ ಸಿಯಾತಲಾಬ್ ನಗರದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ 16.60 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳುತ್ತಿರುವ ಮಳೆ ನೀರು ಚರಂಡಿ ನಿರ್ಮಾಣ ಕಾಮಗಾರಿಗಳ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ನಗರದ ಓಪೆಕ್ ಆಸ್ಪತೆಯಲ್ಲಿ ಕಿದ್ವಾಯಿ ಕ್ಯಾನ್ಸರ್ ಸೆಂಟರ್ ಕಟ್ಟಡದ ಗುದ್ದಲಿ ಪೂಜೆ ಮತ್ತು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿನಿಯರ ವಸತಿ ನಿಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ಕಲಬುರಗಿ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೃಷ್ಣಗೌಡ ತಾಯಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *