ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಅವರು 2026ರ ಜನವರಿ 3 ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಮಧ್ಯಾಹ್ನ 12.30ಕ್ಕೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಸಿಟಿ ಮುನಿಸಿಪಲ್ ಗ್ರೌಂಡ್ ಹೆಲಿಪ್ಯಾಡನಿಂದ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 3.30ಕ್ಕೆ ಸಿಂಧನೂರಿನ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿನ ಹೆಲಿಪ್ಯಾಡಗೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದ ಶ್ರೀ ಅಂಬಾಮಠ ಆವರಣದಲ್ಲಿ ನಡೆಯುವ ಶ್ರೀ ಅಂಬಾದೇವಿಯ ಅಂಬಾರಿ ರಥೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
