ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಬೋಸರಾಜು ಅವರು 2026ರ ಜನವರಿ 4 ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಯಚೂರು ಉತ್ಸವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಪೂರ್ವಭಾವಿ ಸಭೆ ಮತ್ತು ಲೋಗೊ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ನಗರದ ಸಿಯಾತಲಾಬ್ ನಗರದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ 16.60 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳುತ್ತಿರುವ ಮಳೆ ನೀರು ಚರಂಡಿ ನಿರ್ಮಾಣ ಕಾಮಗಾರಿಗಳ ಗುದ್ದಲಿ ಪೂಜೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಭಾಗವಹಿಸುವರು.
ಮಧ್ಯಾಹ್ನ 1 ಗಂಟೆಗೆ ಕಿದ್ವಾಯಿ ಕ್ಯಾನ್ಸರ್ ಸೆಂಟರ್ ಕಟ್ಟಡದ ಗುದ್ದಲಿ ಪೂಜೆ ಮತ್ತು ರಿಮ್ಸ್ ಸಂಸ್ಥೆಯ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿನಿಯರ ವಸತಿ ನಿಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಭಾಗವಹಿಸುವರು. ಬಳಿಕ ವಿವಿಧ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾತ್ರಿ 11 ಗಂಟೆಗೆ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
