ರಾಜ್ಯದ ಕಾಂಗ್ರೆಸ್ ಸರ್ಕಾರ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆ ಗ್ರಾಮೀಣ ಭಾಗದ ಮನೆಗಳಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಕಾರಣ ತಾಲೂಕಿನ ಉಪ್ಪಲದೊಡ್ಡಿ ಗ್ರಾಮದ ನಿವಾಸಿ ಹನುಮಮ್ಮ ಗಂಡ ದುರುಗಪ್ಪ ನಡುಲುಮನಿ ಅವರು, ತಮಗೆ ಪ್ರತಿ ತಿಂಗಳು ಬರುತ್ತಿದ್ದ 2 ಸಾವಿರ ಗೃಹಲಕ್ಷ್ಮಿ ಹಣ ಉಳಿತಾಯ ಮಾಡಿ ಇಂದು ತಮ್ಮ ಮನೆಗೆ ಒಂದು ಹೊಸ ಫ್ರಿಡ್ಜ್ ಖರೀದಿಸುವ ಮೂಲಕ ಆರ್ಥಿಕ ಸಬಲೀಕರಣದ ಹಾದಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

 

ಸಂಸದ ರಾಜಶೇಖರ್ ಹಿಟ್ನಾಳ್ ಹಾಗೂ ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ ಹಾಗೂ ಯುವ ನಾಯಕ ಆರ್.ಸಿದ್ದನಗೌಡ ತುರ್ವಿಹಾಳರವರ ಸಮರ್ಥ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷದ ಭರವಸೆಗಳು ಹೇಗೆ ಸಾಮಾನ್ಯ ಜನರ ಬದುಕಿನಲ್ಲಿ ಹೆಮ್ಮೆಯ ಬೆಳಕು ತರುತ್ತಿವೆ ಎಂಬುದಕ್ಕೆ ಇದೊಂದು ನಿದರ್ಶನವಾಗಿದೆ.

 

ಇಂತಹ ಅದ್ಭುತ ಯೋಜನೆಯನ್ನು ಜಾರಿಗೆ ತರಲು ಕಾರಣಿಕರ್ತರಾಗಿ ಶ್ರಮಿಸಿದ ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕದ ಎಲ್ಲಾ ನಾಯಕರಿಗೆ ಈ ಮೂಲಕ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗುತ್ತಿದೆ. ಸರ್ಕಾರದ ಹಣವನ್ನು ಅತ್ಯಂತ ಜಾಣ್ಮೆಯಿಂದ ಸದುಪಯೋಗಪಡಿಸಿಕೊಂಡು, ತಮ್ಮ ಮನೆಯ ದಶಕಗಳ ಕನಸನ್ನು ನನಸು ಮಾಡಿಕೊಂಡ ಹನುಮಮ್ಮನವರ ಸಾಧನೆ ಸ್ತ್ರೀಶಕ್ತಿಯ ಗೌರವವನ್ನು ಎತ್ತಿ ಹಿಡಿದಿದ್ದು, ಇದು ಇಡೀ ನಾಗರಿಕ ಸಮಾಜವೇ ಹೆಮ್ಮೆ ಪಡುವಂತಹ ಮತ್ತು ಕೃತಜ್ಞತೆ ಸಲ್ಲಿಸಬೇಕಾದ ಕ್ಷಣವಾಗಿದೆ.

Leave a Reply

Your email address will not be published. Required fields are marked *