ತಾಳಿಕೋಟಿ: ಪಟ್ಟಣದ ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ಪಾಲಕರ ಸಮಾಲೋಚನೆ ಸಭೆ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ
ಸಂಸ್ಥೆಯ ಕಾರ್ಯದರ್ಶಿ ಸಚಿನ.ಎಚ್.ಪಾಟೀಲ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಕಠಿಣ ಪರಿಶ್ರಮ ಪಡುವಂತವರಾಗಬೇಕು. ಕಠಿಣ ಪರಿಶ್ರಮದಿಂದ ಎಂತಹ ಸಾಧನೆಯಾದರೂ ಮಾಡಬಹುದು. ಅವರು ದೇಶದ ಅಮೂಲ್ಯ ಸಂಪತ್ತಾಗಿದ್ದಾರೆ ಜೀವನದಲ್ಲಿ ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಂಡು ಸಂಸ್ಥೆ ಹಾಗೂ ಹೆತ್ತವರಿಗೆ ಕೀರ್ತಿ ತರುವ ಕೆಲಸ ಮಾಡಬೇಕು ಎಂದರು. ಶಿಕ್ಷಕ ಎಸ್.ಸಿ.ಗುಡಗುಂಟಿ ಮಾತನಾಡಿ ಮಕ್ಕಳು ಮೊಬೈಲ್ ಗೀಳಿಗೆ ಅತಿಯಾಗಿ ಅಂಟಿಕೊಳ್ಳದಂತೆ ಪಾಲಕರು ನೋಡಿಕೊಳ್ಳಬೇಕು ಅತಿಯಾದ ಮೊಬೈಲ್ ಬಳಕೆ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಇದು ಅವರ ಕಲಿಕೆಗೆ ಹಿನ್ನಡೆ ಉಂಟು ಮಾಡುತ್ತದೆ ಎಂದರು. ಶಿಕ್ಷಕ ಸಂತೋಷ್ ಜಾಮಗೊಂಡಿ ಮಾತನಾಡಿ ಮಕ್ಕಳ ಉಜ್ವಲ ಭವಿಷ್ಯದ ನಿರ್ಮಾಣದಲ್ಲಿ ಶಿಕ್ಷಕರಷ್ಟೇ ಅಲ್ಲ ಪಾಲಕರ ಜವಾಬ್ದಾರಿಯೂ ಕೂಡಾ ಇದೆ ಅವರು ಈ ನಿಟ್ಟಿನಲ್ಲಿ ಶಿಕ್ಷಕರೊಂದಿಗೆ ಸಹಕರಿಸಬೇಕು ಎಂದು ವಿನಂತಿಸಿಕೊಂಡರು. ಇದೇ ಸಂದರ್ಭದಲ್ಲಿ ಹತ್ತನೇ ತರಗತಿಯ ಫಲಿತಾಂಶ ಸುಧಾರಣೆ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಟಾರ್ ಆಫ್ ದಿ ಮಂತ್ ಬ್ಯಾಚ್ ಹಾಕಿ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಶಿಕ್ಷಕ ಬಿ.ಆಯ್.ಹಿರೇಹೊಳಿ, ಎಚ್.ಬಿ.ಪಾಟೀಲ, ಎಸ್.ಬಿ.ಸಾಸನೂರ, ಪಾಲಕರ ಪ್ರತಿನಿಧಿ ದೇವಪ್ಪ.ತೋಟದ,
ಲಕ್ಷ್ಮೀ ಚೌವಾಣ, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು. ಶಿಕ್ಷಕ ಭರಮಪ್ಪ ಐ.ಹಿರೇಹೊಳಿ ನಿರೂಪಿಸಿ ವಂದಿಸಿದರು.

