ಲಿಂಗಸಗೂರು : ಜ 4 . ಪಟ್ಟಣದ ಹಟ್ಟಿ ಚಿನ್ನದ ಗಣಿಯ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (AIDWA) ವತಿಯಿಂದ ಸಮಾಜ ಸುಧಾರಕಿ, ಮಹಿಳಾ ಶಿಕ್ಷಣದ ಮುಂಚೂಣಿ ನಾಯಕಿ ಅವರ ಜನ್ಮದಿನವನ್ನು ಹಟ್ಟಿ ಪಟ್ಟಣದ ಪೈ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

‎ಭಾರತ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಉಪಾಧ್ಯಕ್ಷೆ ಶಾಂತಾ ಕೆ ಸಾವಿತ್ರಿಬಾಯಿ ಫುಲೆರವರ ಬಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಾತನಾಡಿದ ಅವರು

ಸಾವಿತ್ರಿಬಾಯಿ ಫುಲೆ ಅವರು ದೇಶದ ಮೊದಲ ಮಹಿಳಾ ಶಿಕ್ಷಕಿಯಾಗಿದ್ದು, ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹಾಗೂ ಜಾತಿ–ಲಿಂಗ ಆಧಾರಿತ ಅಸಮಾನತೆಯ ವಿರುದ್ಧ ಧೈರ್ಯವಾಗಿ ಹೋರಾಡಿದ ಮಹಾನ್ ಚಿಂತಕಿ. ಅವರ ಆದರ್ಶಗಳು ಇಂದಿನ ಸಮಾಜಕ್ಕೆ ದಿಕ್ಕು ತೋರಿಸುತ್ತವೆ” ಎಂದರು.

‎ನಂತರ ಮಾತನಾಡಿದ ರಜೀಯಾ, ಇಂದಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅಸಮಾನತೆ ಹಾಗೂ ಅನ್ಯಾಯಗಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕಾದ ಅಗತ್ಯವಿದೆ” ಎಂದು ಹೇಳಿದರು.
‎ಸಿಪಿಎಂ ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು ಮಾತನಾಡಿ, ಶಿಕ್ಷಣವೇ ಸಾಮಾಜಿಕ ಬದಲಾವಣೆಯ ಪ್ರಮುಖ ಸಾಧನ ಎಂಬುದನ್ನು ಸಾವಿತ್ರಿಬಾಯಿ ಫುಲೆ ಅವರು ತಮ್ಮ ಜೀವನದ ಮೂಲಕ ಸಾಬೀತುಪಡಿಸಿದ್ದಾರೆ. ಮಹಿಳೆಯರ ಹಕ್ಕುಗಳು, ಸಮಾನತೆ ಮತ್ತು ಘನತೆಯ ಬದುಕಿಗಾಗಿ ನಡೆಯುತ್ತಿರುವ ಹೋರಾಟಗಳಿಗೆ ಅವರ ಚಿಂತನೆಗಳು ಸದಾ ಪ್ರೇರಣೆಯಾಗಿವೆ ಎಂದು ತಿಳಿಸಿದರು.
‎ಕಾರ್ಯಕ್ರಮದಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜೀವನ, ಹೋರಾಟ ಹಾಗೂ ಸಾಮಾಜಿಕ ಕೊಡುಗೆಗಳ ಕುರಿತು ಚರ್ಚೆ ನಡೆಯಿತು. ಮಹಿಳಾ ಶಿಕ್ಷಣ, ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ಮಹತ್ವವನ್ನು ನೆನಪಿಸಲಾಯಿತು.
‎ಕಾರ್ಯಕ್ರಮಕ್ಕೆ ಸಾಹೀರಾ ಖಾನ್ ವಂದಿಸಿದರು.

ಈ ಸಂದರ್ಭಗಳಲ್ಲಿ ಗಾಯತ್ರಿ, ಯಶೋಧ, ದೇವಮ್ಮ, ಅಂಬಮ್ಮ, ಲಕ್ಷ್ಮೀ, ಜಯಮ್ಮ, ವಾಯಿದಾ, ಹುಸೇನಬೀ, ಸಮಂಗಲಾ, ಗಿರಿಜಾ, ಭಾಗ್ಯ, ಬೇಗಂ, ನಿಂಗಪ್ಪ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *