ಮಾನ್ವಿ: ಪಟ್ಟಣದ ಐತಿಹಾಸಿಕ ಬೆಟ್ಟದ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು ಬೆಳಿಗ್ಗೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಮೂರ್ತಿಗೆ ರುದ್ರಭಿಷೇಕ,ಬಿಲ್ವರ್ಚಾನೆ, ಮಹಾಮಂಗಳಾರತಿ ನಡೆಯಿತು ಅಕ್ಕಿಯಿಂದ ಮಾಡಿದ ಕೀರಿಟವನ್ನು ಸ್ವಾಮಿಯ ಮೂರ್ತಿಗೆ ಹಾಕಿ ವಿಶೇಷ ಅಲಂಕಾರವನ್ನು ಮಾಡಲಾಯಿತು. ದೇವಸ್ಥಾನದ ಆವರಣದಲ್ಲಿನ ಶ್ರೀ ಭ್ರಮರಾಂಭ ದೇವಿ ಮೂರ್ತಿಗೆ ಅಭಿಷೇಕ ಹಾಗೂ ಮಹಾಮಂಗಳಾರತಿ ವಿಶೇಷ ಅಲಂಕಾರ ಮಾಡಲಾಯಿತು. ಸಂಜೆ ಪಲ್ಲಕ್ಕಿಯಲ್ಲಿ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಉತ್ಸವ ಮೂರ್ತಿಯನ್ನು ಕೂಡಿಸಿ ಮೆರವಣಿಗೆ ನಡೆಸಿ ರಥದಲ್ಲಿ ಕೂಡಿಸಿ ಸಾವಿರಾರು ಭಕ್ತರಿಂದ ರಥೋತ್ಸವ ನಡೆಯಿತು.
ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಚೀಕಲಪರ್ವಿ ಶ್ರೀ ರುದ್ರಮುನೀಶ್ವರ ಮಠದ ಶ್ರೀ ಸಾದಶಿವ ಮಹಾಸ್ವಾಮಿಗಳು, ಸುವರ್ಣಗೀರಿ ಮಠದ ಶ್ರೀ ಶಂಕರಯ್ಯಸ್ವಾಮಿಗಳು ಸೇರಿದಂತೆ ಮಾನ್ವಿ ಪಟ್ಟಣ ಹಾಗೂ ಸುತ್ತ ಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದರು.
ಬೆಟ್ಟದ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಶ್ರೀ ಭ್ರಮರಾಂಭ ದೇವಿ ದೇವಸ್ಥಾನ ಸಮಿತಿಯಿಂದ ಭಕ್ತರಿಗೆ ಅಗತ್ಯವ್ಯವಸ್ಥೆ ಕಲ್ಪಿಸಲಾಗಿತ್ತು.
ಮಾನ್ವಿ: ಪಟ್ಟಣದ ಐತಿಹಾಸಿಕ ಬೆಟ್ಟದ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷವಾಗಿ ಅಕ್ಕಿ ಕಿರೀಟದ ಅಲಂಕಾರ ಮಾಡಲಾಯಿತು.
ಮಾನ್ವಿ: ಪಟ್ಟಣದ ಐತಿಹಾಸಿಕ ಬೆಟ್ಟದ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಮಹಾರಥೋತ್ಸವ ಸಾವಿರಾರು ಭಕ್ತರಿಂದ ವೈಭವದಿಂದ ನಡೆಯಿತು.


