ಲಿಂಗಸುಗೂರು : ಶಿಕ್ಷಣ ಕ್ಷೇತ್ರದಲ್ಲಿ ಕಲ್ಯಾಣ ಕರ್ನಾಟಕ ಭಾಗ ಹಿಂದುಳಿಯಲು ಶಿಕ್ಷಕರ ಕೊರತೆ ಕಾರಣವಾಗಿದೆ. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ.ನಮೋಶಿ ಸರ್ಕಾರಕ್ಕೆ ಒತ್ತಾಯಿಸಿದರು.

 

ಪಟ್ಟಣದ ಪದವಿ ಪೂರ್ವ ಪ್ರೌಢ ಶಾಲಾ ವಿಭಾಗದಲ್ಲಿ ತಾಲೂಕು ಆಡಳಿತ ಕ್ಷೇತ್ರಶಿಕ್ಷಣ ಕಾರ್ಯಾಲಯ ಲಿಂಗಸುಗೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಕಲ್ಯಾಣ ಕರ್ನಾಟಕ ಮುಂದೆ ಬರಬೇಕಾದರೆ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದರು.

ವಿದ್ಯಾರ್ಥಿಗಳ ಸರ್ವಾಂಗಿಣ ಅಭಿವೃದ್ಧಿಗೆ ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

 

ಶಾಸಕ ಮಾನಪ್ಪ ವಜ್ಜಲ್ ಮಾತನಾಡಿ ಪಠ್ಯದ ಜೊತೆ ಪಠೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅಷ್ಟೆ ಮುಖ್ಯ ಅಂದಾಗ ಸಾಧನೆ ಮಾಡಲು ಸಾಧ್ಯ.ನಮ್ಮ ಭಾಗದಲ್ಲಿ 19 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅತಿಥಿ ಶಿಕ್ಷಕರಿಂದ ಶಾಲೆಗಳನ್ನು ನಡೆಸಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ನಮ್ಮ ಭಾಗದ ವಿದ್ಯಾರ್ಥಿಗಳು ಹೇಗೆ ಮುಂದೆ ಬರಲು ಸಾಧ್ಯ. ಕೂಡಲೇ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದರು.

 

ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ, ಕಲಾ ಪ್ರತಿಭೆ ಮತ್ತು ಸಾಂಸ್ಕೃತಿಕ ಅರಿವು ಸಮಾಜದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದೆ. ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಂತಹ ವೇದಿಕೆಗಳು ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸಿ, ಅವರ ಅಡಗಿರುವ ಪ್ರತಿಭೆಯನ್ನು ಹೊರತರುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.

 

ಈ ಸಂದರ್ಭದಲ್ಲಿ ಕು.ಸತ್ಯಮ್ಮ ತಹಶೀಲ್ದಾರ, ಸುಜಾತ ಹೂನೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೌಕರಕ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಾಪ್ಪ, ಬಸವರಾಜ ಕರಡಿ, ಬಸವರಾಜ ಹಂದ್ರಾಳ, ಶರಣಗೌಡ ಅಗಸಿ ಮುಂದಿನ, ಸಂಗಯ್ಯ ಗಣಾಚಾರಿ, ಜಮದಗ್ನಿ ಸೇರಿ ತಾಲೂಕಿನ ವಿವಿಧ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *