ಮಾನ್ವಿ, ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎನ್.ಎಸ್.ಎಸ್ ಘಟಕದ ವತಿಯಿಂದ ಅಕ್ಷರದ ಅವ್ವ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘NSS Cup’ ಪಂದ್ಯಾವಳಿಯನ್ನು ಸಂಸ್ಥೆಯ ಉಪಪ್ರಾಂಶುಪಾಲರಾದ ಸುಧಾಕರ ಸಂಜೀವ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳು ಹಾಗೂ ಅವರ ಹೋರಾಟದ ಬದುಕನ್ನು ಅಳವಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು. ಅಲ್ಲದೆ, ಘಟಕದಿಂದ ಹಮ್ಮಿಕೊಂಡಿರುವ ವಾರ್ಷಿಕ ಕ್ರೀಡಾ ಚಟುವಟಿಕೆಗಳಲ್ಲಿ ಎಲ್ಲಾ ವಿದ್ಯಾರ್ಥಿನಿಯರು ಕ್ರೀಡಾ ಮನೋಭಾವದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಪ್ರೋತ್ಸಾಹಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಮಂಜುಳಾ ಹಿರೇಮಠ್, ಸಾವಿತ್ರಿಬಾಯಿ ಫುಲೆ ಅವರ ಜೀವನ ಚರಿತ್ರೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ಸಂಪೂರ್ಣವಾಗಿ ಮಾಹಿತಿ ನೀಡಿದರು.

 

ಈ ಸಂದರ್ಭದಲ್ಲಿ ಶಿಕ್ಷಕರಾದ ಬಂಡೆಮ್ಮ, ಅಶೋಕ್ ಕುಮಾರ್ ಮಳ್ಳಿ,ಮಂಜುಳಾ ಹಿರೇಮಠ, ರಜನಿ, ಶೇಖ್ ಹುಸೇನ್, ಚನ್ನಬಸವರಾಜ, ಪ್ರಮೋದ ಕುಮಾರ, ಶ್ರೀಮತಿ ಕಟ್ಟಿ, ನುಜಹತ್ ಫಾತಿಮಾ, ಅನ್ವರ್ ಹುಸೇನ್, ಜಯಭೀಮ ಭಾವಿಕಟ್ಟಿ, ಈರಾಮಣಿ,ಶರತ್ ಕುಮಾರ್, ರಾಜಶೇಖರ. ಎಚ್, ರೇಣುಕಾ ಇದ್ದರು.

Leave a Reply

Your email address will not be published. Required fields are marked *