ರಾಯಚೂರು ಜನವರಿ 03 (ಕರ್ನಾಟಕ ವಾರ್ತೆ): ಇಲ್ಲಿನ ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮಕ್ಕೆ ಅರ್ಹ ಅಭ್ಯರ್ಥೀಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮಕ್ಕೆ, ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟಪಂಗಡ ಅಭ್ಯರ್ಥಿಗಳು ಜನವರಿ 20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ: ಪ್ರವಾಸೋದ್ಯಮ ಇಲಾಖೆ, ಗಣೇಶ ಗುಡಿ ಹತ್ತಿರ, ನಿಜಲಿಂಗಪ್ಪ ಕಾಲೋನಿ, ರಾಯಚೂರು-584101, ದೂರವಾಣಿ ಸಂಖ್ಯೆ: 08532-200677ಗೆ ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರಾದ ನಜೀರಆಮದ ಕನವಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *