ರಾಯಚೂರು ಜನವರಿ 04 (ಕರ್ನಾಟಕ ವಾರ್ತೆ):ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ ನಗರ ಸ್ವಚ್ಛತೆಗೆ ಖರೀದಿಸಿದ ಸ್ವೀಪಿಂಗ್ ಯಂತ್ರ, ಒಳಚರಂಡಿ ನಿರ್ವಹಣೆಯ ರೆಹಿಕಲ್ ಮೌಂಟೆಡ್ ರೋಬೋಟ್ ಯಂತ್ರಕ್ಕೆ ಹಾಗೂ ಸ್ವಚ್ಛ ಭಾರತ ಮಿಷನ್ 2.0 ಅಡಿಯಲ್ಲಿ ವಿವಿಧ ಐಇಸಿ ಚಟುವಟಿಕೆಗಳಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಚಾಲನೆ ನೀಡಿದರು.

ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಯಚರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್. ಶಿವರಾಜ ಪಾಟೀಲ್, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಕ್ಷು ಗಿರಿ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ಪಾಲಿಕೆಯ ಉಪ ಆಯುಕ್ತರಾದ ಸಂತೋಷ ರಾಣಿ, ಪಾಲಿಕೆಯ ಸಮಿತಿ ಕಾರ್ಯದರ್ಶಿ ಕೃಷ್ಣ ಶಾವಂತಗೇರಿ, ಪಾಲಿಕೆಯ ಅಧಿಕಾರಿ ಕೃಷ್ಣ ಕಟ್ಟಿಮನಿ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *