ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 7ರಂದು ಬೆಳಗ್ಗೆ 11 ಗಂಟೆಗೆ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆ, ಅಂದು ಬೆಳಗ್ಗೆ 11.30ಕ್ಕೆ ಮಹಾಯೋಗಿ ವೇಮನ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆ ಮತ್ತು ಮಧ್ಯಾಹ್ನ 12 ಗಂಟೆಗೆ ಅಂಬಿಗರ ಚೌಡಯ್ಯ ಜಯಂತಿ ನಿಮಿತ್ತ ಪೂರ್ವಭಾವಿ ಸಿದ್ಧತಾ ಸಭೆ ನಡೆಯಲಿದ್ದು ಆಯಾ ಜಯಂತಿ ಆಚರಣೆಯ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ನಗರದ ಎಲ್ಲಾ ಸಂಘ ಸಂಸ್ಥೆಗಳ ಪ್ರಮುಖರು, ನಾಗರಿಕರು, ಅಧಿಕಾರಿಗಳು ಮತ್ತು ಸಿಬ್ಬಂದಿ ಪೂರ್ವಭಾವಿ ಸಭೆಗೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
