ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಸಾಧನೆ ಯೋಜನೆಯಡಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಸೇವಾ-ಸಿಂಧು ತಂತ್ರಾಂಶದಡಿ (ಪೋರ್ಟಲ್) ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ್ಭಿಣ, ನಗರ ವಿವಿದೋದ್ದೇಶ ಪುನರ್ವಸತಿ (ಎಂ.ಆರ್.ಡಬ್ಲು) ಕಾರ್ಯಕರ್ತರನ್ನು ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ರಾಯಚೂರು ಅವರ ದೂರವಾಣಿ ಸಂಖ್ಯೆ:-08532-200992ಗೆ ಕಚೇರಿಯ ಕೆಲಸದ ಸಮಯದಲ್ಲಿ ಸಂಪರ್ಕಿಸಲು ತಿಳಿಸಲಾಗಿದೆ ಎಂದು ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *