ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ದಂಡವನ್ನು ವಿಧಿಸಿ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಯಚೂರು ಪೀಠ ಸೀನಾ ಸಿಂಧನೂರು ಅವರು ತೀರ್ಪು ನೀಡಿದ್ದಾರೆ.
ಹೌದು, ಸದರಿ ಪ್ರಕರಣದಲ್ಲಿ ಆರೋಪಿತನಾದ ಸಣ್ಣ ಪಾಮಪ್ಪ ಅಲಿಯಾಸ್ ಪಾಮಣ್ಣ ಸಾ.ರತ್ನಾಪುರ, ತಾ.ಮಸ್ಕಿ, ಇತನು ಜನೆವರಿ 2020 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದು, ಈ ಕುರಿತು ಬಾಲಕಿಯ ತಾಯಿ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ದೂರು ನೀಡಿದ್ದರು.
ಅಂದಿನ ಸಿಪಿಐ ಬಾಲಚಂದರ್ ಲಕ್ಕಮ್ ಅಂದಿನ ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ ಸೂಕ್ತ ತನಿಖೆ ನಡೆಸಿ, ದೋಷಾ ರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ನಂತರ ಸುಧೀರ್ಘ ವಿಚಾರಣೆ ನಡೆಸಿ, ಪ್ರಕರಣದ ವಾದ-ವಿವಾದಗಳನ್ನು ಆಲಿಸಿದ ಮಾನ್ಯ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಮೂರನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ರಾಯಚೂರು ಫೀಠ ಸೀನಾ ಸಿಂಧನೂರು ಅವರು, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಜೈಲ್ ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ಮತ್ತು ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ಬಾಲಕಿ ಮತ್ತು ಕುಟುಂಬಕ್ಕೆ 10 ಲಕ್ಷ 50 ಸಾವಿರ ಪರಿಹಾರ ನೀಡಬೇಕೆಂದು ತೀರ್ಪು ನೀಡಿದ್ದಾರೆ.

