ಬಳಗಾನೂರು. ಪಟ್ಟಣದ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಲಯ ಮಟ್ಟದ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಪಿಎಂಶ್ರೀ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಶಾಲೆ ಸುಧಾರಣಾ ಸಮಿತಿಯ ಪದಾಧಿಕಾರಿಗಳು,ಮುಖ್ಯ ಗುರು ,ಶಿಕ್ಷಕರು ,ಶಿಕ್ಷಕರು ಸೇರಿ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ

