ಲಿಂಗಸಗೂರು ಜ 7 ದಲಿತ ಚೇತನ ದಿ. ಲಕ್ಷ್ಮಿ ನಾರಾಯಣ ನಾಗವಾರ ರವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ “ರಾಜ್ಯ ಮಟ್ಟದ ಜನಜಾಗೃತಿ ಸಮಾವೇಶ”ವನ್ನು ಜ.12ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕೊಪ್ಪ ರಸ್ತೆಯ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಾವೇಶವನ್ನು ಆಯುಷ್ಮಾನ್ ಕಿಮ್ಮನೆ ರತ್ನಾಕರ್, ಮಾಜಿ ಸಚಿವರು ಕರ್ನಾಟಕ ಸರ್ಕಾರ ಅವರು ಉದ್ಘಾಟಿಸಲಿದ್ದಾರೆ. ಆಯುಷ್ಮಾನ್ ಅಬ್ಬಯ್ಯ ಪ್ರಸಾದ್, ಶಾಸಕರು ಹುಬ್ಬಳ್ಳಿ–ಧಾರವಾಡ ಪೂರ್ವ ಕ್ಷೇತ್ರ ಹಾಗೂ ಅಧ್ಯಕ್ಷರು, ಕೊಳಚೆ ನಿರ್ಮೂಲನೆ ಮಂಡಳಿ ಬೆಂಗಳೂರು ಅವರು ಬಾಬಾ ಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಿದ್ದಾರೆ.
ಈ ಸಮಾರಂಭದ ಘನ ಅಧ್ಯಕ್ಷತೆಯನ್ನು ಆಯುಷ್ಮಾನ್ ಶಾಮರಾವ್ ಘಾಟೆ, ರಾಜ್ಯ ಸಂಚಾಲಕರು – ಕ.ರಾ.ದ.ಸಂ.ಸಮಿತಿ ಅವರು ವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಆಯುಷ್ಮಾನ್ ಆರ್.ಡಿ. ಮಲ್ಲಯ್ಯ, ಪ್ರಾಂಶುಪಾಲರು, ಶರಾವತಿ ಪ್ರಥಮ ದರ್ಜೆ ಕಾಲೇಜು, ಕೋಣಂದೂರು ಹಾಗೂ ಆಯುಷ್ಮಾನ್ ಡಾ. ಪ್ರದೀಪ್, ಸಹ ಪ್ರಾಧ್ಯಾಪಕರು, ಶರಾವತಿ ಪ್ರಥಮ ದರ್ಜೆ ಕಾಲೇಜು, ಕೋಣಂದೂರು ಅವರು ಆಗಮಿಸಲಿದ್ದಾರೆ.
ಇದಲ್ಲದೆ ಕ.ರಾ.ದ.ಸಂ.ಸಮಿತಿಯ ರಾಜ್ಯ ಮಹಿಳಾ ಸಂಚಾಲಕಿ ಶೋಭಾ ಕಟ್ಟಿಮನಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಮಾವೇಶದ ಆಯೋಜನೆಯಲ್ಲಿ ಭಾಗವಹಿಸಲಿದ್ದಾರೆ. ನಾಡಿನ ಪ್ರಗತಿಪರ ಚಿಂತಕರು, ಸಾಹಿತಿಗಳು, ದಲಿತಪರ ಸಂಘಟನೆಗಳು, ದಿ. ಲಕ್ಷ್ಮಿ ನಾರಾಯಣ ನಾಗವಾರ ಅವರ ಒಡನಾಡಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.
ಈ ಕುರಿತು ರಾಜ್ಯ ಸಂಘಟನಾ ಸಂಚಾಲಕರಾದ ಪ್ರಭುಲಿಂಗ ಮೇಗಳಮನಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *