ರಾಯಚೂರು ಜನವರಿ 06 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026 ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಜನವರಿ 16ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ರಾಯಚೂರು ಜಿಲ್ಲಾಮಟ್ಟದ ಲಗೋರಿ, ಗಿಲ್ಲಿದಾಂಡು, ಕುಂಟೆಬಿಲ್ಲೆ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು, ಈ ಪಂದ್ಯಗಳ ನೋಡಲ್ ಅಧಿಕಾರಿಗಳಾದ ಲಿಂಗಸಗೂರು ತಾಪಂ ಇಓ ಚಂದ್ರಶೇಖರ ಮೊ:9449210752 ಅಥವಾ ದೈಹಿಕ ಶಿಕ್ಷಣ ಶಿಕ್ಷಕರಾದ ಶೇಖರಪ್ಪ ಮೊ.7975221086 ಇವರಿಗೆ ಸಂಪರ್ಕಿಸಿ ತಂಡದ ಹೆಸರು ನೋಂದಾಯಿಸಬಹುದಾಗಿದೆ.
ಈ ದೇಶಿ ಕ್ರೀಡೆಗಳಲ್ಲಿ ಆಸಕ್ತರು ಭಾಗವಹಿಸಿ ರಾಯಚೂರು ಜಿಲ್ಲೆ ಹೆಮ್ಮೆಪಡುವಂತಹ ಕ್ರೀಡೋತ್ಸವ ಮೂಡಿಬರಲು ಸಹಕರಿಸಿ ರಾಯಚೂರು ಉತ್ಸವವನ್ನು ಯಶಸ್ವಿಗೊಳಿಸಲು ಎಲ್ಲಾ ಕ್ರೀಡಾಪಟುಗಳು ಮತ್ತು ಸಾರ್ವಜನಿಕರಲ್ಲಿ ವಿನಂತಿಸಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
