ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ನೋಂದಣಿ ಕಾಯ್ದೆ ಅನ್ವಯ ಪ್ರಕಾಶಕರು 2025 ರಲ್ಲಿ ಮುದ್ರಿಸಿ ಪ್ರಕಟಿಸಿದ ಮೊದಲ ಆವೃತ್ತಿಯ ಪುಸ್ತಕಗಳ 3 ಪ್ರತಿಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯ ಕಬ್ಬನ್ ಪಾರ್ಕ್, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು. ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯು ಅಯ್ಕೆಗಾಗಿ ಸಲ್ಲಿಸಲಾದ 3 ಪ್ರತಿಗಳಲ್ಲಿ ಒಂದನ್ನು ಪರಿಗಣಿಸಲಾಗುತ್ತದೆ.
2025ರಲ್ಲಿ ರಾಜ್ಯದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಪ್ರತಿ ಶಿರ್ಷಿಕೆ ಮೂರು ಪ್ರತಿಗಳನ್ನು ಮುಫತ್ತಾಗಿ ಸಲ್ಲಿಸಿ ದಿನಾಂಕ: 31-01-2026ರ ಸಂಜೆ 5.30ರ ಒಳಗಾಗಿ ನೋಂದಣಿ ಮಾಡಿಸತಕ್ಕದ್ದು, ನೋಂದಣಿಯಾದ ಪುಸ್ತಕಗಳನ್ನು ಮಾತ್ರ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪರಿಗಣಿಸಲಾಗುವುದು. ಅಂತಿಮ ದಿನಾಂಕದ ನಂತರ ನೋಂದಣಿಯಾಗುವ ಪುಸ್ತಕಗಳನ್ನು ಆಯ್ಕೆಗಾಗಿ ಪರಿಗಣಿಸಲಾಗುವುದಿಲ್ಲ.
ಹೊರ ರಾಜ್ಯಗಳಲ್ಲಿ 2025ರಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟವಾಗುವ ಆಂಗ್ಲ, ಹಿಂದಿ ಅಥವಾ ಯಾವುದೇ ಭಾಷೆಯ ಪುಸ್ತಕಗಳನ್ನು ಆಯಾ ರಾಜ್ಯ ಕೇಂದ್ರ ಗ್ರಂಥಾಲಯಗಳಲ್ಲಿ ಅಥವಾ ಕೇಂದ್ರ/ ಆಯಾ ರಾಜ್ಯ ಸರ್ಕಾರಗಳಿಂದ ಅಧಿಸೂಚಿಸಲ್ಪಟ್ಟ ಅಧಿಕೃತ ಪುಸ್ತಕ ನೋಂದಣಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿ, ನೋಂದಣಿ ಪ್ರಮಾಣ ಪತ್ರದ ನಕಲು ಪ್ರತಿಯೊಂದಿಗೆ ಮತ್ತು ಸದರಿ ಪುಸ್ತಕದ ಒಂದು ಪ್ರತಿಯನ್ನು ಆಯ್ಕೆಗಾಗಿ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ಸಲ್ಲಿಸತಕ್ಕದ್ದು, ನಿಗದಿತ ದಿನಾಂಕದ ನಂತರ ಸಲ್ಲಿಸುವ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ.
ಸಾಹಿತ್ಯ, ಮಕ್ಕಳ ಸಾಹಿತ್ಯ, ಕಲೆ ಮತ್ತು ವಿಜ್ಞಾನ ಪ್ರಕಾರಗಳ ಯಾವುದೇ ಭಾಷೆಯ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಸಲ್ಲಿಸಬಹುದಾಗಿದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ ಬಸವರಾಜೇಂದ್ರ ಹೆಚ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *