ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಅಲೆಮಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಾಮಾಜಿಕ, ಶೈಕ್ಷಣಿಕ, ಮತ್ತು ಆರ್ಥಿಕ, ಸ್ಥಿತಿಗತಿ ಉತ್ತಮ ಪಡಿಸಲು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ 05 ಜನ ಸಮುದಾಯದ ಪ್ರತಿನಿಧಿಗಳನ್ನು ನಾಮ ನಿರ್ದೇಶನಕ್ಕೆ ಅಲೆಮಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜಾತಿಯ ಆಸಕ್ತಿಯುಳ್ಳ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮಿತಿಗೆ ನಾಮನಿರ್ದೇಶಿತ ಸದಸ್ಯರಾಗಲು ಇಚ್ಛಿಸಿದಲ್ಲಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಚೇರಿ ರಾಯಚೂರುನಲ್ಲಿ ಅರ್ಜಿಯನ್ನು ಜನವರಿ 12ರಿಂದ ಪಡೆದು ಭರ್ತಿ ಮಾಡಿ ಜನವರಿ 31ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
