ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ತಾಲೂಕಿನ ಸಿದ್ದಪರ್ವತ ಅಂಬಾಮಠದ ಅಂಬಾದೇವಿ ಜಾತ್ರೆಯ ಪ್ರಯುಕ್ತ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತಿ, ತಾಲೂಕು ಇಂದಿರಾಗಾಂಧಿ ಸ್ತ್ರೀ ಶಕ್ತಿ ಒಕ್ಕೂಟ, ಜ್ಞಾನ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಆರ್.ಎಚ್.ನಂ-1ರ ಸಂಯುಕ್ತಾಶ್ರಯದಲ್ಲಿ ಜಾತ್ರೆಯ ಪ್ರಯುಕ್ತ ಹಮ್ಮಿಕೊಂಡು ಯಶಸ್ವಿಗೊಳಿಸಲಾಯಿತು.
ಜ.1 ರಿಂದ 6 ರವರೆಗೆ ಅಂಬಾಮಠದ ಜಾತ್ರೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಶಾಸಕ ಹಂಪನಗೌಡ ಬಾದರ್ಲಿ ಉದ್ಘಾಟಿಸಿ ಚಾಲನೆ ನೀಡಿದ್ದರು. ಜಿಲ್ಲಾ ಮಟ್ಟದ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಮೇಳ ಮತ್ತು ವಸ್ತು ಪ್ರದರ್ಶನ ಆಯೋಜಿಸಿದ್ದು, ಜಿಲ್ಲೆಯ ರಾಯಚೂರು, ಮಾನ್ವಿ, ದೇವದುರ್ಗ, ಮಸ್ಕಿ, ಸಿರವಾರ, ಲಿಂಗಸೂಗುರು, ಹಾಗೂ ಸಿಂಧನೂರು ತಾಲೂಕಿನ ಫಲಾನುಭವಿಗಳು ಯೋಜನೆಯ ಸೌಲಭ್ಯಗಳನ್ನು ಪಡೆದು ಸ್ವಂತ ಚಟುವಟಿಕೆಗಳನ್ನು ಸಹ ಪ್ರಾರಂಭಿಸಿದ್ದಾರೆ.
ತಾವು ಮಾಡಿದ ಉತ್ಪನ್ನಗಳ ಒಟ್ಟು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಪ್ರತಿದಿನ 35ಕ್ಕೂ ಹೆಚ್ಚು ಗುಂಪು ಉತ್ಪನ್ನಗಳು, ವಿವಿಧ ಬಗೆಯ ಚಟ್ನಿ, ರೊಟ್ಟಿ, ಸಿಹಿ ತಿನಿಸುಗಳು, ಕೈಕಸೂತಿಗಳು (ಹಾರ, ಬ್ಯಾಸ್ಕೆಟ್, ಶಾಲು) ಊದುಬತ್ತಿ, ದೂಪ, ಕರ್ಪೂರ, ಲಂಬಾಣಿ ಡ್ರೆಸ್ ಗಳು ಮುಂತಾದ ಅನೇಕ ಉತ್ಪನ್ನಗಳ ಜೊತೆಗೆ ಜ.1ರಿಂದ 6ರವರೆಗೆ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ ಅದ್ದೂರಿಯಾಗಿ ಮುಗಿಸಲಾಯಿತು.
ಈ ಸಂದರ್ಭದಲ್ಲಿ: ಶಾಸಕ ಹಂಪನಗೌಡ ಬಾದರ್ಲಿ,
ರಾಜ್ಯ ಒಕ್ಕೂಟದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷರಾದ ಶ್ರೀದೇವಿ ಶ್ರೀನಿವಾಸ, ಅಂಬಾದೇವಿ ಸಮಿತಿ ಅಧ್ಯಕ್ಷ ರಂಗನಗೌಡ ಗೊರೇಬಾಳ, ಸಹಾಯಕ ನಿರ್ದೇಶಕ ಅಮರಗುಂಡಪ್ಪ, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳಾದ ಲಿಂಗನಗೌಡ, ಅಶೋಕ ತುರ್ವಿಹಾಳ, ಎನ್.ಆರ್.ಎಲ್.ಎಮ್ ಜಿಲ್ಲಾ ವ್ಯವಸ್ಥಾಪಕ ಶ್ರೀಕಾಂತ ಬನ್ನಿಗೋಳ, ಮೇಲ್ವಿಚಾರಕರು, ಸಿಬ್ಬಂದಿಗಳು, ಒಕ್ಕೂಟದ ಪದಾಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರು, ಭಾಗವಹಿಸಿದ್ದರು.

