ಲಿಂಗಸಗೂರು : ಜ 8 – ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದೇಶದ ಎಲ್ಲ ನ್ಯಾಯಾಲಯಗಳಲ್ಲಿ ಜನವರಿ 2 2026 ರಿಂದ ಏಪ್ರಿಲ್ 2 2026 ರವರೆಗೆ 90 ದಿನಗಳ ಕಾಲ ನಡೆಯಲಿರುವ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನವನ್ನು ( 2.O ) ಹಮ್ಮಿಕೊಳ್ಳಲಾಗಿದೆ.
ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಆಯೋಜಿಸಲಾಗಿದೆ. ಈ ಅಭಿಯಾನವು ದೇಶದ ಎಲ್ಲ ನ್ಯಾಯಾಲಯಗಳಲ್ಲಿ ಸಹ ನಡೆಯಲಿದೆ. ಅದೇ ರೀತಿ ಲಿಂಗಸಗೂರು ನ್ಯಾಯಾಲಯಗಳಲ್ಲಿ ಸಹ ರಾಜಿ ಆಗಬಹುದಾದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಗಳಿಗೆ ಕಳಿಸಿ ಅಲ್ಲಿ ವಿಶೇಷ ತರಬೇತಿ ಹೊಂದಿದ ಮಧ್ಯಸ್ಥಿಕೆಗಾರರಿಂದ ರಾಜಿಸಂಧಾನ ಮಾಡಿಸುವ ವ್ಯವಸ್ಥೆ ಇದಾಗಿದೆ. ಕಕ್ಷಿದಾರರು ಈ ಅಭಿಯಾನದ
ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ಶ್ರೇಣಿ ಸಿವಿಲ್ ನ್ಯಾದೀಶರು, ಹಾಗೂ ತಾಲೂಕ ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ನ್ಯಾ. ಉಂಡಿ ಮಂಜುಳಾ ಶಿವಪ್ಪ. ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅಂಬಣ್ಣ.ಕೆ ಪ್ರಧಾನ ಸಿವಿಲ್ ನ್ಯಾಯಾಧೀಶರು ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

