ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಪ್ರಜಾಪ್ರಭುತ್ವದಲ್ಲಿ ಮತದಾನದ ಪಾತ್ರ ಬಹಳ ದೊಡ್ಡದಾಗಿದೆ. ಚುನಾವಣೆಯ ವೇಳೆಯಲ್ಲಿ ಈ ಪ್ರಕ್ರಿಯೆಯನ್ನು ವಿವಿಧ ಹಂತದ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಣೆ ಮಾಡುವುದರ ಮೂಲಕ ಯಶಸ್ವಿಗೊಳಿಸಬೇಕೆಂದು ರಾಜ್ಯ ಸ್ವೀಪ್ ಸಮಿತಿ ನೊಡಲ್ ಅಧಿಕಾರಿ ಪಿ.ಎಸ್.ವಸ್ತçದ್ ಅವರು ಹೇಳಿದರು.
ಜನವರಿ 07ರ ಬುಧವಾರ ದಂದು ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಸ್ವೀಪ್.ಮತ್ತು ಎನ್.ವಿ.ಡಿ ಸ್ಪರ್ಧಾ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಂದೊಂದು ಮತ ಅಭ್ಯರ್ಥಿಯ ಸೋಲು ಮತ್ತು ಗೆಲುವನ್ನು ನಿರ್ಧಾರ ಮಾಡುವ ಶಕ್ತಿ ಇದೆ. ಈಗ ತಮಗೆಲ್ಲ ಗೊತ್ತಿರುವ ಹಾಗೆ ಮತಯಂತ್ರದ ಮೂಲಕ ಮತದಾನದ ಪ್ರಕ್ರಿಯೆ ನಡೆಯುತ್ತಲಿದೆ. ಎಲ್ಲವೂ ಪಾರದರ್ಶಕವಾಗಿ ಚುನಾವಣೆಯ ಕಾರ್ಯಗಳು ಜರಗುತ್ತವೆ. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಸ್ಪರ್ಧೆಗಳನ್ನು ಮಾಡಲಾಗಿತ್ತು. ಇವು ವಿದ್ಯಾರ್ಥಿಗಳಲ್ಲಿ ಮತದಾನದ ಮಹತ್ವ ಚುನಾವಣೆಯ ಪ್ರಕ್ರಿಯೆಗಳನ್ನು ತಿಳಿಸಲು ಬಹಳ ಸಹಾಯಕವಾಗಿದೆ. ಪ್ರತಿಯೊಂದು ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು. ಹಾಗೂ ಪದವಿ ಮತ್ತು ಸ್ನಾತಕೋತ್ತರ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತದಾರರ ಸಾಕ್ಷರತಾ ಕ್ಲಬ್‌ನ್ನು ಸ್ಥಾಪಿಸಲಾಗಿದೆ ಎಂದರು.
ವಿದ್ಯಾರ್ಥಿಗಳಲ್ಲಿ ಸ್ವೀಪ್ ಕಾರ್ಯಕ್ರಮದ ಅಡಿಯಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಯ ಅಂಗವಾಗಿ ಸ್ಪರ್ಧೆಗಳನ್ನು ಆಯೋಜನೆ ಮಾಡುವುದರ ಮೂಲಕ ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಯಲ್ಲಿ ಮತದಾನದ ಪ್ರಕ್ರಿಯೆಗಳು, ಚುನಾವಣೆಯ ಅಂಶಗಳು ಮತ್ತು ಅದರ ಮಹತ್ವವನ್ನು ತಿಳಿದುಕೊಳ್ಳಲು ಇಂತಹ ಸ್ಪರ್ಧೆಗಳು ಸಾಯಕವಾಗಿವೆ. ಅಲ್ಲದೆ ಮಾದರಿಯ ಮತದಾರರ ಪಟ್ಟಿಯ ಸಿದ್ಧಪಡಿಸಲು ಮತಗಟ್ಟೆಯ ಅಧಿಕಾರಿಗಳು ಮಾಡಬೇಕಾದ ಕಾರ್ಯ ಚಟುವಟಿಕೆಗಳು ಕುರಿತು ಮಾಹಿತಿ ನೀಡಿದರು.
ರಾಯಚೂರು ಜಿಲ್ಲೆಯ ರಾಷ್ಟ್ರೀಯ ಮತದಾರ ದಿನಾಚರಣೆಯ ಕಾರ್ಯಕ್ರಮಗಳು ನಾವು ಕಳಿಸಿದ ಸುತ್ತೋಲೆಯಂತೆ ಸಮಯಕ್ಕೆ ಸರಿಯಾಗಿ ತಾಲೂಕ, ಜಿಲ್ಲಾ ಮತ್ತು. ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆಯೋಜನೆ ಮಾಡಬೇಕೆಂದರು.
ಇದೇ ಸಂದರ್ಭದಲ್ಲಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಎಂ. ಹನುಮಂತಪ್ಪ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ರಾಘವೇಂದ್ರ ಕುಲಕರ್ಣಿ, ಚುನಾವಣೆ ತಹಸಿಲ್ದಾರ್ ಪರಶುರಾಮ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸೋಮಶೇಖರ ಹೋಕ್ರಾಣಿ, ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ನೋಡಲ್ ಅಧಿಕಾರಿ ಡಾ. ದಂಡಪ್ಪ ಬಿರಾದಾರ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ವಿವಿಧ ವೈದ್ಯಕೀಯ ಕಾಲೇಜಿನ ಹಾಗೂ ವಿವಿಧ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರು, ತಾಲೂಕ ಆರೋಗ್ಯ ಅಧಿಕಾರಿಗಳು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಮತ್ತು ಜಿಲ್ಲಾ ಡಯಟ್ ಕಾಲೇಜಿನ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Leave a Reply

Your email address will not be published. Required fields are marked *