ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ 11ಕೆವಿ ಹೆಚ್ಚುವರಿ ಪರಿವರ್ತಕಗಳ ಕಾಮಗಾರಿ ಕೈಗೊಂಡ ಪ್ರಯುಕ್ತ ಜನವರಿ 9ರ ಬೆಳಿಗ್ಗೆ 11ರಿಂದ ಮಧ್ಯಾಹ್ನ 2ಗಂಟೆಯವರೆಗೆ ಎನ್.ಜಿ.ಓ ಕಾಲೋನಿ, ಜಮುಲಮ್ಮ ಗುಡಿ ಸೇರಿದಂತೆ ಸುತ್ತಲಿನ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಹಕರ ನಿರಂತರ ಸೇವಾ ಕೇಂದ್ರದ ದೂರವಾಣಿ ಸಂಖ್ಯೆ: 08532-226386, 08532-231999ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
