ಈ ಪ್ರದೇಶದಲ್ಲಿದ್ದ ಸ್ಟೇಷನರಿ ಅಂಗಡಿ, ಬಟ್ಟೆ ಅಂಗಡಿ, ಹಗ್ಗದ ಅಂಗಡಿ ಹಾಗೂ ಚಿಕನ್ ಅಂಗಡಿಗಳಿಗೆ ಬೆಂಕಿ ತಗುಲಿ ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿತು.

ಅಗ್ನಿ ಅವಘಡದ ವೇಳೆ ಸ್ಥಳದಲ್ಲಿದ್ದ ಅಂಗಡಿಯವರು ಸಾಮಾನುಗಳನ್ನು ರಕ್ಷಿಸುವ ಸಲುವಾಗಿ ಅಂಗಡಿಗಳಿಂದ ಸಾಮಾನುಗಳನ್ನು ಹೊರಗೆ ತೆಗೆದು ಹಾಕಲು ಪ್ರಯತ್ನಿಸಿದರು.

ವಿಶೇಷವಾಗಿ ಚಿಕನ್ ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್‌ಗಳನ್ನು ತಕ್ಷಣವೇ ಆಫ್ ಮಾಡಿ ಸುರಕ್ಷಿತವಾಗಿ ಹೊರತೆಗೆದ ಪರಿಣಾಮ, ಹೆಚ್ಚಿನ ಅನಾಹುತ ಸಂಭವಿಸುವುದು ತಪ್ಪಿತು.
ಈ ಅವಘಡದಲ್ಲಿ ಸ್ಟೇಷನರಿ ಸಾಮಗ್ರಿಗಳು, ಬಟ್ಟೆಗಳು, ಹಗ್ಗಗಳು ಸೇರಿದಂತೆ ದೊಡ್ಡ ಪ್ರಮಾಣದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಸಾಧ್ಯತೆ ಇದೆ. ಘಟನೆಯ ಸಮಯದಲ್ಲಿ ಸ್ಥಳದಲ್ಲಿದ್ದವರು ಸುರಕ್ಷಿತವಾಗಿ ಹೊರಬಂದಿರುವುದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬೆಂಕಿಯ ತೀವ್ರತೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತು.

ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಅಥವಾ ಅಜಾಗರೂಕತೆಯಿಂದ ಬೆಂಕಿ ಉಂಟಾಗಿರಬಹುದೆಂದು ಶಂಕಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ದೊರಕುತ್ತಿದ್ದಂತೆಯೇ ಅವರು ಸ್ಥಳಕ್ಕೆ ಧಾವಿಸಿ, ಹಲವು ಅಗ್ನಿಶಾಮಕ ವಾಹನಗಳ ಸಹಾಯದಿಂದ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದರು. ಸ್ಥಳೀಯ ಪೊಲೀಸರು ಹಾಗೂ ನಗರ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *