ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಜರುಗುವ 8 ನೇ ವರ್ಷದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಅಂಗವಾಗಿ ಇಂದು ಶ್ರೀಮಠದ ಪೂರ್ವಭಾವಿ ಸಭೆಯಲ್ಲಿ ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಜಿ ಕುಮಾರ ನಾಯಕರವರು ಪಾಲ್ಗೊಂಡು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜನೆ ಹಾಗೂ ರೂಪರೇಷಗಳ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು, ಈ ವೇಳೆ ಶ್ರೀ ಮಠದ ಶ್ರೀಗಳು ಸಂಸದ ಜಿ ಕುಮಾರ ನಾಯಕರವರನ್ನು ಸನ್ಮಾನಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ಪರಮಪೂಜ್ಯ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ವಾಲ್ಮೀಕಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಸನಗೌಡ ದದ್ದಲ್ ರವರು, ಶಾಸಕರಾದ ಶ್ರೀ ರಘುಮೂರ್ತಿ ರವರು ಸೇರಿದಂತೆ ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು..

