ಬೆಂಗಳೂರು: ಬಳ್ಳಾರಿ ಬ್ಯಾನರ್ ಘರ್ಷಣೆ ಮತ್ತು ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಕುರಿತು ಮಾಜಿ ಸಚಿವ ಎಚ್.ಎಂ. ರೇವಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯು ಗುರುವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉಪಮುಖ್ಯಮಂತ್ರಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವರದಿ ಸಲ್ಲಿಸಿತು. ನಿಯೋಗದಲ್ಲಿ ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಜಿ. ಕುಮಾರ ನಾಯಕ, ಚಳ್ಳಿಕೆರೆ ಶಾಸಕ ಶ್ರೀ ರಘುಮೂರ್ತಿ, ಮಾಜಿ ಸಂಸದ ಶ್ರೀ ಜಯಪ್ರಕಾಶ್ ಹೆಗ್ಡೆ ಮತ್ತು ವಿಧಾನ ಪರಿಷತ್ ಸದಸ್ಯರಾದ ಶ್ರೀ ಜಕ್ಕಪ್ಪನವರ್ ಮತ್ತು ಶ್ರೀ ಬಸವನಗೌಡ ಬಾದರ್ಲಿ ಸೇರಿದಂತೆ ನಿಯೋಗವು ಬಳ್ಳಾರಿಯ ಘರ್ಷಣೆಯ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಕುರಿತು ಸುದೀರ್ಘವಾದ ವರದಿಯನ್ನು ಎಚ್‌ಎಂ ರೇವಣ್ಣ ಮತ್ತು ಇತರ ಸಮಿತಿ ಸದಸ್ಯರು ಬಳ್ಳಾರಿಗೆ ತೆರಳಿ ಸ್ಥಳೀಯ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ, ಅಲ್ಲಿನ ನಿವಾಸಿಗಳೊಂದಿಗೆ ಸಂವಾದ ನಡೆಸಿ, ಘಟನೆಗಳ ಅನುಕ್ರಮ, ಆಡಳಿತಾತ್ಮಕ ಪ್ರತಿಕ್ರಿಯೆ ಮತ್ತು ಆರೋಪದ ಲೋಪಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿದರು. ಹಿಂಸಾಚಾರಕ್ಕೆ ಕಾರಣವಾದ ಸಂಗತಿಗಳು ಮತ್ತು ಕಾರ್ಯಕರ್ತನ ಸಾವಿಗೆ ಕಾರಣವಾದ ಸಂದರ್ಭಗಳನ್ನು ಖಚಿತಪಡಿಸಿಕೊಂಡು ಸತ್ಯಶೋಧನಾ ವರದಿಯನ್ನು ಇಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರಿಗೆ ವರದಿಯನ್ನು ಸಲ್ಲಿಸಿದರು, ವರದಿಯನ್ನು ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿಗಳು ವರದಿ ಈಗಾಗಲೇ ನನ್ನ ಕೈ ಸೇರಿದೆ ಅದನ್ನು ಪರಿಶೀಲಿಸಿದ ನಂತರವೇ ಮಾತನಾಡುತ್ತೇನೆ ಈಗ ಅದರ ಬಗ್ಗೆ ಚರ್ಚಿಸುವುದಿಲ್ಲ ಎಂದು ಹೇಳಿದರು..

Leave a Reply

Your email address will not be published. Required fields are marked *