ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಆರಂಭವಾದವು.
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಚಾಲನೆ ನೀಡಿದರು. ಮಹಿಳಾ ಕ್ರೀಡಾಪಟುಗಳಿಂದ ಕ್ರೀಡಾಜ್ಯೋತಿ ಬೆಳಗಿಸಿದರು.
‘ಜಿಲ್ಲೆಯಿಂದ ಒಟ್ಟು 1266 ನೌಕರರು ಕ್ರೀಡಾಕೂಟಕ್ಕೆ ನೋಂದಣಿ ಮಾಡಿಸಿಕೊಂಡಿದ್ದಾರೆ’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣ ಶಾವಂತಗೇರಾ, ಸಂಘದ ರಾಜ್ಯ ಕಾರ್ಯದರ್ಶಿ ಡಾ.ಶಂಕರಗೌಡ ಎಸ್.ಪಾಟೀಲ, ಮಹಾನಗರ ಪಾಲಿಕೆಯ ಉಪ ಆಯುಕ್ತೆ ಸಂತೋಷರಾಣಿ, ಮುಖಂಡರಾದ ಹಾಜಿಬಾಬು, ದೊಡ್ಡ ನಿಂಗಪ್ಪ, ಭೀಮರಾಜ ಹವಾಲ್ದಾರ್, ಹನುಮಂತ್ರಾಯ, ಆರೀಫ್ ಮಿಯಾ, ಸುರೇಶ ಕುರ್ಡಿ, ಪಂಪಾಪತಿ ಹೂಗಾರ, ಭೀಮೇಶ ನಾಯಕ ಉಪಸ್ಥಿತರಿದ್ದರು.

