ರಾಯಚೂರು ಜನವರಿ 09 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಉತ್ಸವ-2026ವು ಜನವರಿ 29, 30 ಮತ್ತು 31ರಂದು ಅತ್ಯಂತ ವೈಭವಯುತವಾಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ರಾಯಚೂರು ಉತ್ಸವವು ಅತ್ಯಂತ ವಿಶಿಷ್ಟವಾಗಿ ಮತ್ತು ಆಕರ್ಷಣೀಯವಾಗಿ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯ ಅತ್ಯುತ್ತಮ ಕಲಾ ತಂಡಗಳನ್ನು ಆಯ್ಕೆ ಮಾಡುವಂತೆ ರಾಯಚೂರು ಉತ್ಸವದ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ. ಜಿಲ್ಲೆಯ ಎಡೆದೊರೆ ನಾಡು ರಾಯಚೂರು ಉತ್ಸವ-2026ರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಾಯಚೂರು ಜಿಲ್ಲೆಯಿಂದ ವೇದಿಕೆ ಕಲಾ ತಂಡ/ ಜಾನಪದ ಕಲಾ ತಂಡಗಳು ತಮ್ಮ ಸ್ವವಿವರದ ಮಾಹಿತಿಯ ಅರ್ಜಿಗಳನ್ನು ಇ ಕಚೇರಿಗೆ ಜನವರಿ 12ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
