ರಾಯಚೂರು ಜನವರಿ 09 (ಕರ್ನಾಟಕ ವಾರ್ತೆ): ತಾಲೂಕಿನ ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 29 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಆದೇಶದನ್ವಯ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿ ಪ್ರಕಟಣೆಯನ್ನು ಹೊರಡಿಸಲಾಗಿರುತ್ತದೆ. ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2026ರ ಜನವರಿ 15ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ಅವಕಾಶ ನೀಡಿಲಾಗಿದೆ.
ಒಂದನೇ ಹಂತ: ಆನ್‌ಲೈನ್ ತಂತ್ರಾಂಶದಲ್ಲಿ ನಿಗಧಿತ ಅರ್ಜಿ ನಮೂನೆಯಲ್ಲಿ ಮಾಹಿತಿ ತುಂಬುವುದು, ಎರಡನೇ ಹಂತ: ತಮ್ಮ ಭಾವಚಿತ್ರ ಸಹಿಯನ್ನು ಅಪ್‌ಲೋಡ್ ಮಾಡುವುದು, ಮೂರನೇ ಹಂತ: ತಮ್ಮ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು, ನಾಲ್ಕನೇ ಹಂತ: ತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಜನವರಿ 15 ರೊಳಗಾಗಿ ವೆಬ್‌ಸೈಟ್ ವಿಳಾಸ: https://karnemakaone.kar.nic.in/abcd/ ನಲ್ಲಿ ಪೂರ್ಣಗೊಳಿಸಬೇಕು. ಆನ್‌ಲೈನ್‌ನಲ್ಲಿ ಅಪೂರ್ಣ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಾರ್ಯಾಲಯ ಗಿಲ್ಲೇಸೂಗೂರು ಇವರನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕ ಮಾಡಬಹುದಾಗಿದೆಂದು ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
