ಅರಕೇರಾ:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷರಾದ ಸೈಯ್ಯದ ಫೈಯಾಜುದ್ದೀನ್ ಇವರ ಆದೇಶದ ಮೇರೆಗೆ, ಹಾಗೂ ದೇವದುರ್ಗ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿಯಾದ ಶ್ರೀಮತಿ ಶ್ರೀದೇವಿ ನಾಯಕ ಇವರ ಶಿಫಾರಸ್ಸಿನ ಮೇರೆಗೆ ಕಾಂಗ್ರೇಸ್ ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ ಶ್ರೀ ಕಾಸಿಂ ಅಲಿ ತಂದೆ ಖಲೀಲ್ ಸಾಬ ಬಿ ಗಣೇಕಲ್ ಇವರನ್ನು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅರಕೇರಾ ತಾಲೂಕ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಯಿತು.
ತಕ್ಷಣದಿಂದಲೇ ಜವಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸಂಘಟನೆ ಜೊತೆಗೆ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಯಲ್ಲಿ ತೊಡಗಬೇಕೆಂದು ನೇಮಕಾತಿ ಆದೇಶ ಪತ್ರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವದುರ್ಗ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿಯಾದ ಶ್ರೀಮತಿ ಶ್ರೀದೇವಿ ನಾಯಕ, ಅರಕೇರಾ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ದಸ್ತಗೀರಿ ಸಾಬ್ ಕೊತ್ತದೊಡ್ಡಿ, ಸುಭಾನ್ ಸುಲ್ತಾನ್ ಮುಂತಾದವರು ಇದ್ದರು.

