ತಾಳಿಕೋಟಿ: ಪಟ್ಟಣದ ಶ್ರೀ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿ,ಇದರ ನೂತನ ಕಟ್ಟಡದ ಉದ್ಘಾಟನೆ ಜನವರಿ12 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10-30 ಘಂಟೆಗೆ ಎಪಿಎಂಸಿ ಆವರಣದಲ್ಲಿರುವ ಸಂಘದ ನೂತನ ಕಟ್ಟಡದ ಉದ್ಘಾಟನೆ ಜರುಗುವುದು. ನಂತರ ಮು.11-00 ಘಂಟೆಗೆ ಸ್ಥಳೀಯ ಎಪಿಎಂಸಿ ಸಭಾಭವನದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದ್ದು ಇದರ ದಿವ್ಯ ಸಾನಿಧ್ಯವನ್ನು ವಿರಕ್ತಮಠ ಇಂಗಳೇಶ್ವರದ ಮ.ನಿ.ಪ್ರ.ಜಗದ್ಗುರು ಡಾ.ಸಿದ್ಧಲಿಂಗ ಸ್ವಾಮಿಗಳು ಹಾಗೂ ತಾಳಿಕೋಟಿ ಶ್ರೀ ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಶ್ರೀ ಸಿದ್ಧಲಿಂಗ ದೇವರು ವಹಿಸುವರು. ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ ನೂತನ ಕಟ್ಟಡ ಉದ್ಘಾಟಿಸುವರು. ಕೆ ಎಸ್ ಡಿ ಎಲ್ ಅಧ್ಯಕ್ಷ,ಶಾಸಕ ಅಪ್ಪಾಜಿ ನಾಡಗೌಡರು ಸೇಫ್ ಲಾಕರ್ ಉದ್ಘಾಟಿಸುವರು. ಶ್ರೀ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕಾಶೀನಾಥ ಎಸ್.ಮುರಾಳ ಅಧ್ಯಕ್ಷತೆ ವಹಿಸುವರು. ವಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ ಎಸ್ ಪಾಟೀಲ(ಯಾಳಗಿ) ಪ್ರಾಸ್ತಾವಿಕವಾಗಿ ಮಾತನಾಡುವರು. ಮುಖ್ಯಅತಿಥಿಗಳಾಗಿ ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ,ಮಾಜಿ ಶಾಸಕರಾದ ಎ.ಎಸ್.ಪಾಟೀಲ(ನಡಹಳ್ಳಿ), ಸೋಮನಗೌಡ ಪಾಟೀಲ ಸಾಸನೂರ,ಕ.ರಾ.ಸೌ.ಸಂ.ಸ.ನಿ. ಅಧ್ಯಕ್ಷ ಜಿ.ನಂಜನಗೌಡ ಸಿ.ಎ. ಕ.ರಾ.ಸೌ.ಸಂ.ಸ.ನಿ.ನಿರ್ದೇಶಕ ರಾಮನಗೌಡ ಬಿ.ಪಾಟೀಲ(ಯತ್ನಾಳ), ಸಹಕಾರ ಸಂಘಗಳ ಸಹಾಯಕ ನಿಬಂಧಕ ಚೇತನ್ ಭಾವಿಕಟ್ಟಿ ಆಗಮಿಸುವರು.ಸಹ ಅತಿಥಿಗಳಾಗಿ ಎಪಿಎಂಸಿ ಮಾಜಿ ಅಧ್ಯಕ್ಷರಾದ ಗುರು ತಾರನಾಳ, ಮಲ್ಲಣ್ಣ ಯಾತಗಿರಿ,ವಿ.ವಿ.ಸಂಘದ ಅಧ್ಯಕ್ಷ ವೀರಪಾಕ್ಷಯ್ಯ ಸಿ.ಹಿರೇಮಠ, ಸಹಕಾರಿ ಬ್ಯಾಂಕ್ ಅಧ್ಯಕ್ಷ ಕೆ.ಸಿ. ಸಜ್ಜನ, ಎಪಿಎಂಸಿ ಕಾರ್ಯದರ್ಶಿ ಆರ್ ಎಸ್ ರಾಠೋಡ ಆಗಮಿಸಲಿದ್ದು, ಶ್ರೀ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರು ಉಪಸ್ಥಿತರಿರುವರು ಎಂದು ಪ್ರಭಾರ ಮುಖ್ಯ ಕಾರ್ಯನಿರ್ವಾಹಕ ಮುತ್ತುಗೌಡ ಎಸ್.ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *