ರಾಯಚೂರು : ಮುಂಬರುವ ಚುನಾವಣೆಗೆ ಕಾರ್ಯಕರ್ತರನ್ನು ಸಿದ್ದಗೊಳಿಸಲು ಹಾಗೂ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತಾಗಿ ಮಾಹಿತಿ ನೀಡಲು ಜಿಲ್ಲಾ ಜೆಡಿಎಸ್ ಪಕ್ಷದಿಂದ ಜ.11 ರಂದು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಸಾಮಾಜಿಕ ಜಾಲತಾಣದ ಬಳಕೆ ಕುರಿತು ಕಾರ್ಯಕರ್ತರಿಗೆ ತರಬೇತಿ ಕಾರ್ಯಗಾರ ಆಯೋಜಿಸಲಾಗಿದೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆಯಲ್ಲಿ ಸ್ವತಂತ್ಯ್ರವಾಗಿ ಸ್ಪರ್ಧಿಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೆಗೌಡ ನಿರ್ಧರಿಸಿ ಸೂಚನೆ ನೀಡಿದ್ದಾರೆ. ಪ್ರತಿ ಬೂತ ಎಜೆಂಟ್‌ಗಳಿಗೆ ತರಬೇತಿ ಸಮಾಜಿಕ ಜಾಲತಾಣ ಬಳಕೆ ಕುರಿತು ಅರಿವು ಮೂಡಿಸಲಾಗುತ್ತದೆ. ಈಗಾಗಲೇ ನಾಲ್ಕು ತಂಡಗಳನ್ನು ರಚಿಸಿ ರಾಜ್ಯಾಧ್ಯಂತ ಪ್ರವಾಸ ಕೈಗೊಳ್ಳಲು ನಿರ್ಧರಿಸಲಾಗಿದೆ. ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಯುವಕ ಯುವತಿಯರನ್ನು ಸಿದ್ದಗೊಳಿಸಲಾಗುತ್ತಿದೆ ಎಂದರು.

2002 ರಲ್ಲಿ ನಡೆದಿದ್ದ ಮತದಾರರ ಪರಿಷ್ಕರಣೆ ಮತ್ತೆ ನಡೆಸಲು ಸರ್ಕಾರಗಳು ಉದ್ದೇಶಿಸಿದರಿಂದ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಸೇರ್ಪಡೆ, ಮರಣ ಹೊಂದಿದವರು, ಸ್ಥಳಾಂತರಗೊಂಡವರ ಮಾಹಿತಿ ಸಂಗ್ರಹಿಸಿ ಮತದಾರರ ವಿಶೇಷ ಪರಿಷ್ಕರಣೆಗೆ ಪಕ್ಷದ ಕಾರ್ಯಕರ್ತರ ತೊಡಗಿಸುವಿಕೆ ಕುರಿತು ಮಾಹಿತಿ ಒದಗಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಎನ್.ಶಿವಶಂಕರ, ಪ್ರಮುಖರಾದ ಲಕ್ಷ್ಮೀಪತಿ ಗಾಣಧಾಳ, ಸಣ್ಣ ನರಸಿಂಹ ನಾಯಕ, ರಾಮಕೃಷ್ಣ, ಅಮರೇಶ ಪಾಟೀಲ್, ನಾಗರಾಜಗೌಡ ಇದ್ದರು.

Leave a Reply

Your email address will not be published. Required fields are marked *