ಮಾನ್ವಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ ಬೇಸಿಗೆಯಲ್ಲಿ ತಾಲೂಕಿನ ಗ್ರಾಮೀಣ ಭಾಗ ಸೇರಿದಂತೆ ಮಾನ್ವಿ ಪಟ್ಟಣದಲ್ಲಿನ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ತಾಲೂಕಿನಲ್ಲಿರುವ ಎಲ್ಲಾ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸುವುದಕ್ಕೆ ಕ್ರಮ ಕೈಗೊಳ್ಳುವಂತೆ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಅಧಿಕಾರಿ ಎ.ಇ.ಇ. ಸತೀಶರವರಿಗೆ ಸೂಚಿಸಿದರು, ವಿದ್ಯುತ್ ಪೂರೈಕೆಯಲ್ಲಿ ಯಾವುದೆ ಅಡಚಣೆಯುಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜೆಸ್ಕಾಂ ಇಲಾಖೆಯ ಎ.ಇ.ಇ. ವೈದ್ಯನಾಥಸ್ವಾಮಿಯವರಿಗೆ ಸೂಚಿಸಿದರು. ತಾಲೂಕಿಗೆ ಮಂಜೂರಾಗಿರುವ ರಸ್ತೆ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಶೀಘ್ರವೇ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆಎ.ಇ.ಇ. ನಬೀರಸುಲ್ ರವರಿಗೆ ಸೂಚಿಸಿದರು. ವಿವಿಧ ಇಲಾಖೆಗಳಿಗೆ ಸರ್ಕಾರದಿಂದ ಮಂಜೂರಾದ ಅಭಿವೃದ್ದಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕ ಹಂಪಯ್ಯನಾಯಕಮಾತನಾಡಿದರು.
ತಹಶೀಲ್ದಾರ್ ಭೀಮರಾಯ ಬಿ ರಾಮಸಮುದ್ರ , ಪಿ.ಐ. ಸೋಮಶೇಖರ ಎಸ್. ಕೆಂಚರೆಡ್ಡಿ,ಚೌಹಾಣ್, ಪುರಸಭೆ ಮುಖ್ಯಾಧಿಕಾರಿ ಪರಶುರಾಮದೇವಮಾನೆ , ಬಿ.ಇ.ಓ. ಚಂದ್ರಶೇಖರ .ಡಿ, ಸೇರಿದಂತೆ ಇನ್ನಿತರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದರು.

