ತಾಳಿಕೋಟಿ: ಪಕ್ಷ ಸಂಘಟನೆ ಬಲಪಡಿಸುವ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರನ್ನು ದೇವರ ಹಿಪ್ಪರಗಿ ಮತಕ್ಷೇತ್ರ ಬಿಜೆಪಿ ಮುಖಂಡ ಬಸನಗೌಡ ಎಸ್. ಪಾಟೀಲ (ಯಡಿಯಾಪುರ)ಬಿ. ಸಾಲವಾಡಗಿ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಮತ್ತು ಹಾಲಿ ನಿರ್ದೇಶಕರಾದ ಸುರೇಶ್ ಸಜ್ಜನ ಅವರು ಶನಿವಾರ ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ದೇವರಹಿಪ್ಪರಗಿ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಯ ಅಗತ್ಯತೆ, ಕಾರ್ಯಕರ್ತರ ಸಕ್ರಿಯತೆ, ಬೂತ್ ಮಟ್ಟದ ಸಂಘಟನೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ತಂತ್ರ, ರೂಪ ರೇಷೆ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು.
ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸವಾಗಬೇಕು ಹಾಗೂ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಇನ್ನಷ್ಟೂ ಬಲಿಷ್ಠವಾಗುವಂತೆ ಮಾಡಲು ಸೂಕ್ತ ಮಾರ್ಗದರ್ಶನ ನೀಡುವಂತೆ ರಾಜ್ಯಾಧ್ಯಕ್ಷರಿಗೆ ಮನವಿಮಾಡ ಲಾಯಿತು. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ದೇವರಹಿಪ್ಪರಗಿ ಕ್ಷೇತ್ರದ ಸಂಘಟನೆಗೆ ಅಗತ್ಯ ಬೆಂಬಲ ನೀಡುವುದಾಗಿ ತಿಳಿಸಿ ಇನ್ನೂ ಹೆಚ್ಚು ಕ್ರಿಯಾಶೀಲತೆಯೊಂದಿಗೆ ಕೆಲಸ ಮಾಡಿ ಎಂದು ತಿಳಿಸಿದರು. ಮುಖಂಡ ಬಸನಗೌಡ ಪಾಟೀಲ ಯಡಿಯಾಪುರ ಅವರ ಈ ಭೇಟಿ ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಬಿಜೆಪಿಯ ಸಂಘಟನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

