ಹಾಲಾಪೂರ ಗ್ರಾಮಕ್ಕೆ ಎನ್ ಎಸ್ ಬೋಸರಾಜು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರು ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ, ಉದ್ಘಾಟನೆಗಾಗಿ ಆಗಮಿಸಿದ್ದರು. ನಂತರ ಸುದ್ದಿಗಾರರ ಜೊತೆ ಮಾತನಾಡುತ್ತಾ ಜಿಲ್ಲೆಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ವೇಗವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಜನಪರ, ಅಭಿವೃದ್ಧಿಪರ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದು ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಕೆಲಸ ಮಾಡುತ್ತಿದ್ದು, ವಿರೋಧ ಪಕ್ಷಗಳಿಗೆ ಸಹಿಸಲು ಆಗುತ್ತಿಲ್ಲ ಪ್ರತಿಯೊಂದು ಕೆಲಸದಲ್ಲೂ ಟಿಕೆ ಟಿಪ್ಪಣಿ ಮಾಡುವುದು ಬಿಟ್ಟರೆ ಬೇರೆ ಯಾವ ಕೆಲಸ ಇಲ್ಲ, ಬರುವ ದಿನಗಳಲ್ಲಿ ಮತ್ತಷ್ಟು ಕೆಲಸ ಮಾಡಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಆರ್ ಬಸನಗೌಡ ತುರವಿಹಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಪಾಟೀಲ್ ಯದ್ದಲದಿನ್ನಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ, ಅಂದಾನಪ್ಪ ಗುಂಡಳ್ಳಿ, ವೆಂಕಟರೆಡ್ಡಿಗೌಡ, ಗ್ಯಾರಂಟಿ ಸಮಿತಿ ಅಧ್ಯಕ್ಷ ಮಹಿಬೂಬ್ ಸಾಬ ಮುದ್ದಾಪುರ, ಎಚ್ ಬಿ ಮುರಾರಿ ಹಾಗೂ ಇನ್ನು ಅನೇಕ ಮುಖಂಡರು, ಕಾರ್ಯಕರ್ತರು ಇದ್ದರು.

