ಸಿಂಧನೂರು:
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಯಚೂರು, ದೇವದುರ್ಗ ತಾಲ್ಲೂಕು ಘಟಕದ ಸಂಯುಕ್ತಾಶ್ರಯದಲ್ಲಿ ಇದೇ.23ರಂದು ನಡೆಯುವ 70ನೇ ಕರ್ನಾಟಕ ರಾಜ್ಯೋತ್ಸವ ಆಚರಣಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಿಂಧನೂರಿನ ಇಬ್ಬರು ಸಾಧಕರಿಗೆ ‘ಜಿಲ್ಲಾ ರಾಜ್ಯೋತ್ಸವ’ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಹೆಚ್.ಎಫ್.ಮಸ್ಕಿ ತಿಳಿಸಿದ್ದಾರೆ.
ಶುಕ್ರವಾರ ಈ ಕುರಿತು ಹೇಳಿಕೆ ನೀಡಿರುವ ಅವರು 70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ, ‘ಒಂದಾಗಲಿ ನಮ್ಮ ನುಡಿ, ಒಂದಾಗಲಿ ನಮ್ಮ ನಡೆ’ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭ ಹಮ್ಮಿಕೊಂಡಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಿಂಧನೂರಿನ ನರಸಿಂಹಪ್ಪ ರಾಮತ್ನಾಳ, ಹುಸೇನ್ ಸಾಬ್ ಸಿಂಧನೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಯಚೂರಿನ ಜಾಫರ್ ಮೋಹಿನುದ್ದೀನ್ ಹಾಗೂ ಸಿರವಾರದ ರತ್ನಮ್ಮ ಬಿ.ಎಸ್. ದೇಸಾಯಿ ಅವರಿಗೆ ಗೌರವ ಸನ್ಮಾನ ಮಾಡಲಾಗುವುದು. ಶಾಸಕಿ ಕರೆಮ್ಮ ಜಿ.ನಾಯಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಅಧ್ಯಕ್ಷತೆವಹಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ….

ನರಸಿಂಹಪ್ಪ ರಾಮತ್ನಾಳ

ಹುಸೇನ್ ಸಾಬ್
