ಕಳೆದ ಕೆಲವು ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಇದೀಗ ಹವಾಮಾನ ಇಲಾಖೆಯು ರಾಜ್ಯದ ಹಲವೆಡೆ ಧಾರಾಕಾರ ಮಳೆಯ ಮುನ್ಸೂಚನೆ ನೀಡಿದೆ. ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಈ ಅನಿರೀಕ್ಷಿತ ಮಳೆಗೆ ಪ್ರಮುಖ ಕಾರಣವಾಗಿದೆ ಎಂದು ಐಎಂಡಿ ತನ್ನ ಅಧೀಕೃತ ವೆಬ್ಸೈಟ್ನಲ್ಲಿ ಹಂಚಿಕೊಂಡಿದೆ.
ಕರ್ನಾಟಕದ ಹವಾಮಾನ ವರದಿ

ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಪ್ರದೇಶಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಆದಾಗ್ಯೂ, ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಕಡೆ ಶೀತಗಾಳಿ ಮುಂದುವರಿಯಲಿದೆ.
ಪ್ರಮುಖ ಎಚ್ಚರಿಕೆ ನೀಡಿದ ಐಎಂಡಿ!

ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹಳೆಯ ಕಟ್ಟಡಗಳು ಮತ್ತು ಮರಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಹಾಗೆಯೇ ಈ ಸಮಯದಲ್ಲಿ ಜನರು ಮನೆಯಿಂದ ಹೊರ ಬರದೆ ಮನೆಯ ಕಿಟಕಿ, ಬಾಗಿಲುಗಳನ್ನು ಮುಚ್ಚಿಕೊಳ್ಳಬೇಕು ಎಂದು ತಿಳಿಸಿದೆ.

ಗುಡುಗು ಸಹಿತ ಮಳೆಯ ನಿರೀಕ್ಷೆ ಇರುವುದರಿಂದ ಜನರು ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದೆಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದಾಗ್ಯೂ, ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿಯ ವೇಳೆ ಮಳೆ ಹೆಚ್ಚಾಗುವ ಸಂಭವವಿದ್ದು, ಸಾರ್ವಜನಿಕರು ಪ್ರಯಾಣದ ವೇಳೆ ಜಾಗೃತಿ ವಹಿಸುವುದು ಉತ್ತಮ

Leave a Reply

Your email address will not be published. Required fields are marked *