ಮಾನ್ವಿ: ಪಟ್ಟಣದ ಪತ್ರಿಕಾ ಭವನದಲ್ಲಿ ಮೌಲಾನಾ ಅಬುಲ್ ಕಲಾಂ ಆಜಾದ್ ಬ್ರೀಗೆಡ್ ಜಿಲ್ಲಾಧ್ಯಕ್ಷರಾದ ಸೈಯಾದ್ ಹುಸೇನ್ ಸಾಹೇಬ್ ಮಾತನಾಡಿ ಭಾರತ ರತ್ನ ಮೌಲಾನಾ ಅಬುಲ್ ಕಲಾಂ ಆಜಾದ್ ರವರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು ಹಾಗೂ ಸ್ವಾತಂತ್ರ್ಯಕ್ಕಾಗಿ ನಂತರದಲ್ಲಿ ಕೇಂದ್ರದ ಮೋದಲ ಶಿಕ್ಷಣ ಸಚಿವರಾಗಿ ದೇಶದ ಶೈಕ್ಷಣಿಕ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿದ್ದಾರೆ ಇವರ ಸಾಧನೆಯನ್ನು ಗುರುತಿಸಿದ ಯು.ಪಿ.ಐ.ಸರ್ಕಾರದ ಪ್ರಧಾನಿ ಮನಮೋಹನ್ ಸಿಂಗ್ ರವರು ನ.11 ರಂದು ಭಾರತ ರತ್ನ ಮೌಲಾನಾ ಅಬುಲ್ ಕಲಾಂ ಆಜಾದ್ ರವರ ಜಯಂತಿಯನ್ನು ಆಚರಿಸುವುದಕ್ಕೆ ಅದೇಶ ನೀಡಿದರು ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವರ ಜಯಂತಿಯನ್ನು ಆಚರಿಸುವುದಕ್ಕೆ ಮುಂದಾಗುತ್ತಿಲ್ಲ ಅವರ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಯನ್ನು ಗೌರವಿಸುವ ಉದ್ದೇಶದಿಂದ ಪ್ರಾರಂಭಿಸಲಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅಂಗ್ಲಮಾಧ್ಯಮ ಅಲ್ಪಸಂಖ್ಯಾತರ ಶಾಲೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು, ಸಿರವಾರ ಪಟ್ಟಣ ಹಾಗೂ ಕವಿತಾಳ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದವರು ಇರುವುದರಿಂದ ಅಲ್ಲಿನ ಮಕ್ಕಳ ವಿದ್ಯಾಭ್ಯಸಕ್ಕೆ ಅಗತ್ಯವಿರುವ ಉರ್ದು ಫ್ರೌಢಶಾಲೆಗಳನ್ನು ಅಭಿವೃದ್ದಿ ಪಡಿಸಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿನ ಅಲ್ಪಸಂಖ್ಯೆತ ಸಮುದಾಯದವರ ಸಮಸ್ಯೆಗಳ ನಿವಾರಣೆಗಾಗಿ ಜಿಲ್ಲಾ ಮಟ್ಟದ ಬೃಹತ್ ಸಮವೇಶವನ್ನು ಮೌಲಾನಾ ಅಬುಲ್ ಕಲಾಂ ಆಜಾದ್ ಬ್ರೀಗೆಡ್ ವತಿಯಿಂದ ಹಮ್ಮಿಕೊಳ್ಳಲಾಗುವುದು.ಎಂದು ತಿಳಿಸಿದರು.
ಗೌರವಾಧ್ಯಕ್ಷರಾದ ಇಸ್ಮಾಯಿಲ್ ಸಾಬ್ ತಾ.ಅಧ್ಯಕ್ಷರಾದ ಜಮೀಲ್ ಇಸ್ಮಾಯಿಲ್, ಉಪಾಧ್ಯಕ್ಷ ಸೈಯಾದ್ ಸಲೀಂ ಪಾಷಾ ಕಾರ್ಯದರ್ಶಿ ಅಜ್ಮೀರ್ ಪಾಷಾ, ನಗರ ಘಟಕದ ಅಧ್ಯಕ್ಷರಾದ ನಸಿರುದ್ದಿನ್ ಚೌದ್ರಿ ಇದ್ದರು.

Leave a Reply

Your email address will not be published. Required fields are marked *