ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ಇಲ್ಲಿನ ಸಹಕಾರ ಸಂಘಗಳ ಉಪ ನಿಬಂಧಕರವರ ಕಾರ್ಯಾಲಯದಿಂದ 2025-26ನೇ ಸಾಲಿನ ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಾಯಿಸುವ ಪ್ರಕ್ರಿಯೆ ಆರಂಭವಾಗಿದೆ.
ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಾಗಿದ್ದು, ಈ ಯೋಜನೆಯಡಿ ನೋಂದಾಯಿಸಲು ಸರ್ಕಾರವು ಆದೇಶ ಹೊರಡಿಸಿದ್ದು, ಅದರನ್ವಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ, ಪಿಕಾರ್ಡ ಬ್ಯಾಂಕಗಳ, ಹಾಲು ಉತ್ಪಾದಕರ ಸಹಕಾರ ಸಂಘಗಳ, ಟಿ.ಎ.ಪಿ.ಸಿ.ಎಮ್.ಎಸ್‌ಗಳ ಹಾಗೂ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರಡಿ ಅಥವಾ ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997ರಡಿ ಅಥವಾ ಬಹು ರಾಜ್ಯ ಸಹಕಾರಿ ಸಂಘಗಳ ಕಾಯ್ದೆ 2002ರಡಿ ನೋಂದಾಯಿಸಿ, ಕಾರ್ಯನಿರ್ವಹಿಸುತ್ತಿರುವ ಯಾವುದೇ ಸಹಕಾರ ಸಂಘಗಳ ಸದಸ್ಯರು ಮತ್ತು ಗ್ರಾಮೀಣ ಸಹಕಾರ ಸಂಘಗಳ/ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳ ಮತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ ಸಂಘಟಿಸಲ್ಪಟ್ಟಿರುವ ಸ್ವಸಹಾಯ ಗುಂಪುಗಳ ಸದಸ್ಯರುಗಳು ಗರಿಷ್ಟ ನಾಲ್ಕು ಸದಸ್ಯರ ಕುಟುಂಬಕ್ಕೆ ವಾರ್ಷಿಕ ವಂತಿಗೆ 500ರೂ.ಗಳು ವಂತಿಗೆ ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಹೆಚ್ಚುವರಿ ಸದಸ್ಯರಿಗೆ 100ರೂ.ಗಳನ್ನು ಪಾವತಿಸಿ ನೋಂದಾಯಿಸಬಹುದು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ. ಅದೇ ರೀತಿ ನಗರ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಾಯಿಸಲು ಈ ಯೋಜನೆಯಡಿ ಗರಿಷ್ಟ ನಾಲ್ಕು ಸದಸ್ಯರ ಕುಟುಂಬಕ್ಕೆ ವಾರ್ಷಿಕ ವಂತಿಗೆ ರೂ.1000/- ರಂತೆ ವಂತಿಗೆ ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಹೆಚ್ಚುವರಿ ಸದಸ್ಯರಿಗೆ ರೂ.200/-ಗಳನ್ನು ಪಾವತಿಸಿ ನೋಂದಾಯಿಸಬಹುದು. ನವಜಾತ ಶಿಶು ತಾಯಿ ಹೆಸರು ಇರುವ ಯಶಸ್ವಿನಿ ಕಾರ್ಡ್ನ ಆಧಾರದ ಮೇಲೆ ಈ ಯೋಜನೆಯಡಿಯಲ್ಲಿ ಸೌಲಭ್ಯವನ್ನು ಮುಂದಿನ ವರ್ಷ ನೋಂದಾಣಿಯಾಗುವವರೆವಿಗೆ ಪಡೆಯಬಹುದು. ನಂತರದಲ್ಲಿ ಮಗುವಿನ ಹೆಸರನ್ನು ನೊಂದಾಯಿಸಿಕೊಂಡು ಯೋಜನೆಯ ಸೌಲಭ್ಯ ಪಡೆಯಬಹುದು.
ಯಶಸ್ವಿನಿ ಯೋಜನೆಯಡಿ ಸದಸ್ಯರಾಗಲು ಸಹಕಾರ ಸಂಘಗಳಲ್ಲಿ ಸದಸ್ಯರಾಗಿ ಯಶಸ್ವಿನಿ ಯೋಜನೆಯಡಿ ನೋಂದಾಯಿಸುವ ದಿನಾಂಕಕ್ಕೆ ಕನಿಷ್ಠ 3 ತಿಂಗಳು ಕಳೆದಿರಬೇಕು. ಹಾಗೂ ವಯೋಮಿತಿಯ ನಿರ್ಬಂಧವಿರುವುದಿಲ್ಲ.
ಈ ಯೋಜನೆಯಡಿ ಯಶಸ್ವಿನಿ ಸದಸ್ಯರುಗಳನ್ನು ನೋಂದಾಯಿಸುವ/ನೋAದಣಿ ಪ್ರಕ್ರಿಯೆಯನ್ನು ದಿನಾಂಕ:03-01-2026 ರಿಂದ ಪ್ರಾರಂಭವಾಗಿರುವುದರಿಂದ ಸದರಿ ಯೋಜನೆಯಡಿ ಸರಿ ಸುಮಾರು 1650 ಖಾಯಿಲೆಗಳಿಗೆ ಚಿಕಿತ್ಸೆಗಳು ಮತ್ತು 478 ಐ.ಸಿ.ಯು ಚಿಕಿತ್ಸೆಗಳು ಒಟ್ಟು 2128 ಚಿಕಿತ್ಸೆಗಳನ್ನು ಯಶಸ್ವಿನಿ ಯೋಜನೆಯಡಿ ಅಳವಡಿಸಿಕೊಂಡಿರುವುದರಿಂದ ಸದರಿ ಯೋಜನೆಯ ಫಲಾನುಭವಿಗಳ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಠ ಮಿತಿ 5.00 ಲಕ್ಷ ರೂ.ಗಳಿಗೆ ನಿಗಧಿಪಡಿಸಿದೆ. ರಾಜ್ಯದ ಯಾವುದೇ ಯಶಸ್ವಿನಿ ನೆಟ್‌ವರ್ಕ ಅಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಲು ಅವಕಾಶವಿರುತ್ತದೆ. ಸದರಿ ಯೋಜನೆಯಡಿಯಲ್ಲಿ ನೋಂದಾಯಿಸಿ ಪ್ರಯೋಜನೆ ಪಡೆದುಕೊಳ್ಳಲು ಕೋರಲಾಗಿದೆ. 2025-26ನೇ ಯಶಸ್ವಿನಿ ಯೋಜನೆಯ ಅವಧಿ ದಿನಾಂಕ:03-01-2026 ರಿಂದ 31-03-2026ರವರೆಗೆ ಜಾರಿಯಲ್ಲಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖಾ ಕಚೇರಿಗಳನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: ರಾಯಚೂರು 988730795, 7996998253, 08532-226268/9902165419, ಸಿಂಧನೂರು- 08535-230550/9844669557, ಮಾನವಿ 9164034407, ಲಿಂಗಸೂಗೂರು 9972551962, ಸಹಕಾರ ವಿಸ್ತೀರ್ಣಾಧಿಕಾರಿ ರಾಯಚೂರು 8904641721, ದೇವದುರ್ಗ 9686647802, ಸಿಂಧನೂರು 9880744147, ಮಸ್ಕಿ 9901103053, ಸಿರವಾರ 9900612229ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
