ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಡಾ||ಎ.ಪಿ.ಜೆ, ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಸೇವಾಸಿಂಧು ಮೂಲಕ ಆನ್ ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ರಾಯಚೂರು (ಬೋಳಮಾನದೊಡ್ಡಿ ರಸ್ತೆ), ಗಿಲ್ಲೇಸೂಗೂರು (ಚಂದ್ರಬಂಡ ರಸ್ತೆ), ಯರಮರಸ್ ಕ್ಯಾಂಪ್, ಗಿಲ್ಲೆಸುಗೂರು ಕ್ಯಾಂಪ್, ಮಾನವಿ, ಸಿಂಧನೂರು, ಚನ್ನಹಳ್ಳಿ, ಮಸ್ಕಿ, ಲಿಂಗಸೂಗೂರು, ಸಿರವಾರ, ದೇವದುರ್ಗ ಮತ್ತು ಡಾ||ಎ.ಪಿ.ಜೆ, ಅಬ್ದುಲ್ ಕಲಾಂ ವಸತಿ ಶಾಲೆ, ಯರಮರಸ್ ಕ್ಯಾಂಪ್ ರಾಯಚೂರಿನಲ್ಲಿ 6ನೇ ತರಗತಿಯಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ.75 ರಷ್ಟು ಸ್ಥಾನಗಳನ್ನು ಮತ್ತು ಶೇ.25 ರಷ್ಟು ಸ್ಥಾನಗಳನ್ನು ಇತರೆ ವರ್ಗದವರಿಗೆ ಮೀಸಲಿರಿಸಲಾಗಿದೆ.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ 1,00,000 ರೂ.ಕ್ಕೆ ಮೀತಿಯಲ್ಲಿರಬೇಕು. ಹಾಗೂ ಹಿಂದುಳಿದ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 2,50,000 ರೂ.ಮಿತಿಯೊಳಗಿರತಕ್ಕದ್ದು, ಪ್ರಸ್ತುತ ಕರ್ನಾಟಕದ ಸರ್ಕಾರದ/ಅಂಗೀಕೃತ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ದಿಸ್ಟ್, ಸಿಖ್ ಮತ್ತು ಪಾರ್ಸಿ ಅರ್ಹ ವಿದ್ಯಾರ್ಥಿಗಳು ಮತ್ತು ಪ.ಜಾತಿ/ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಸೇವಾಸಿಂಧು ವೆಬ್‌ಸೈಟ್ ವಿಳಾಸ: Website:https://sevasindhuservices.karnataka.gov.in ನಲ್ಲಿ ಫೆಬ್ರವರಿ 10ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ: 8277799990, 08022535902, ರಾಯಚೂರು ಮೊಬೈಲ್ ನಂಬರ್: 8496098631, 9731028420, 9731341815, 9686853719, 6361866571, 9108175899, 9902906266 ಮಾನವಿ, ಸಿರವಾರ: 7411771075, 886733478, ದೇವದುರ್ಗ 9731794252, 9148233616, ಲಿಂಗಸೂಗೂರು, ಮಸ್ಕಿ ಮತ್ತು ಸಿಂಧನೂರು: 8217621732, 9740871306, 8660879712ಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
