ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಜನವರಿ 25ರ ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೈಕ್ಲಿಂಗ್ ಮ್ಯಾರಥಾನ್ ಸ್ಪರ್ಧೆ ಆಯೋಜನೆ ಮಾಡಲಾಗಿದೆ. ಆಸಕ್ತರು ಈ ಸ್ಪರ್ಧೆಯ ನೋಡಲ್ ಅಧಿಕಾರಿಗಳಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರ ಮೊಬೈಲ್ ಸಂಖ್ಯೆ: 9972316898 ಅಥವಾ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ವಿಜಯಶಂಕರ್ ಮೊಬೈಲ್ ಸಂಖ್ಯೆ: 9448427601ಗೆ ಸಂಪರ್ಕಿಸಿ ಹೆಸರು ನೋಂದಾಯಿಸಬಹುದಾಗಿದೆ.
ಈ ಕ್ರೀಡೆಗಳಲ್ಲಿ ಆಸಕ್ತರು ಭಾಗವಹಿಸಿ ರಾಯಚೂರು ಜಿಲ್ಲೆ ಹೆಮ್ಮೆಪಡುವಂತಹ ಕ್ರೀಡೋತ್ಸವ ಮೂಡಿಬರಲು ಸಹಕರಿಸಿ ರಾಯಚೂರು ಉತ್ಸವವನ್ನು ಯಶಸ್ವಿಗೊಳಿಸಲು ಎಲ್ಲಾ ಕ್ರೀಡಾಪಟುಗಳು ಮತ್ತು ಸಾರ್ವಜನಿಕರಲ್ಲಿ ವಿನಂತಿಸಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *