ಮಸ್ಕಿ : ಪಟ್ಟಣದ 17,18ನೇ ವಾರ್ಡ್ ಸೇರಿದಂತೆ ವಿವಿಧ ವಾರ್ಡ್ ಗಳಿಗೆ ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್ ಬಸನಗೌಡ ತುರುವಿಹಾಳ ಅವರು ಸೋಮವಾರ ಭೇಟಿ ನೀಡಿ ವಾರ್ಡುಗಳಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿ ಪರಿಶೀಲನೆ ನಡೆಸಿದರು. ಪಟ್ಟಣದ 17 ಹಾಗೂ 18 ನೇ ವಾರ್ಡಿನಲ್ಲಿ ಬೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಸಾರ್ವಜನಿಕರು ಇಲ್ಲಿನ ಬಡಾವಣೆಯಲ್ಲಿ ಮಳೆ ಬಂದರೆ ಚರಂಡಿಯಿಂದ ನೀರು ಹೊರಗಡೆ ಬಂದು ರಸ್ತೆ ಮೇಲೆಯೇ ನಿಲ್ಲುತ್ತದೆ ಇದರಿಂದ ಓಡಾಡಲು ತೊಂದರೆಯಾಗುತ್ತದೆ ಆದ್ದರಿಂದ ಸೂಕ್ತ ಚರಂಡಿ ವ್ಯವಸ್ಥೆ ಹಾಗೂ ಸಿಸಿ ರಸ್ತೆಯನ್ನು ಮಾಡುವಂತೆ ಶಾಸಕರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಆರ್ ಬಸನಗೌಡ ತುರುವಿಹಾಳ ಅವರು ಪಟ್ಟಣದ ಯಾವ ಯಾವ ವಾರ್ಡುಗಳಲ್ಲಿ ಏನೆಲ್ಲಾ ಸಮಸ್ಯೆ ಇದೆಯೋ ಎನ್ನುವುದನ್ನು ಪಟ್ಟಿ ಸಿದ್ಧಪಡಿಸಿ ಮುಂಬರುವ ದಿನಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಲು ಬೇಕಾದ ಅನುದಾನ ಒದಗಿಸಿ ಇಲ್ಲಿನ ಜನರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿ ನರಸ ರೆಡ್ಡಿ ಅವರಿಗೆ ಸೂಚನೆ ನೀಡಿದರು. ಅಲ್ಲದೆ ಪಟ್ಟಣದ ಎಲ್ಲಾ ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ವಿದ್ಯುತ್ ದೀಪ ಹಾಗೂ ಸೂಕ್ತ ಚರಂಡಿ ವ್ಯವಸ್ಥೆ ಸೇರಿದಂತೆ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಿ ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯ ಅಧಿಕಾರಿ ನರಸರೆಡ್ಡಿ, ಮಸ್ಕಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಮಹಿಬೂಬ್ ಸಾಬ್ ಮುದ್ದಾಪುರ್, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾಗಭೂಷಣ, ಪುರಸಭೆ ಸದಸ್ಯರಾದ ಕೃಷ್ಣ ಚಿಗರಿ, ಶಿವು ಬ್ಯಾಳಿ, ಸಾರಪ್ಪ ಬಂಗಾಲಿ, ಮಲ್ಲಯ್ಯ ಮುರಾರಿ, ನಿಸಾರ್ ಅಹ್ಮದ್, ಶಿವರೆಡ್ಡಿ, ಮಲ್ಲಯ್ಯ ಮಲ್ಕಪುರ, ರಮೇಶ್ ಕಾಸ್ಲಿ,
ಸೇರಿದಂತೆ ಇನ್ನಿತರ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *