ರಾಯಚೂರು ಜನವರಿ 12 (ಕ.ವಾ.): ಬಹುವರ್ಷಗಳ ನಂತರ ರಾಯಚೂರು ಜಿಲ್ಲೆಯಲ್ಲಿ ಜನವರಿ 29, 30 ಹಾಗೂ 31ರಂದು ನಿಗದಿಯಾದ ಎಡೆದೊರೆ ನಾಡು ರಾಯಚೂರು ಉತ್ಸವ 2026ರ ಸಾಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರು ಹೇಳಿದರು.
ರಾಯಚೂರಿನ ತಾಲೂಕು ಪಂಚಾಯತ್ ಕಚೇರಿ ಸಂಭಾಗಣದಲ್ಲಿ ಜನವರಿ 12ರಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ರೂಪರೇಷಗಳ ಕುರಿತು ಶಾಸಕರು, ಗ್ರಾಮೀಣ ಕ್ಷೇತ್ರದ ವಿವಿಧ ಕಲಾತಂಡಗಳು, ಸಾಹಿತಿಗಳು, ವಿದ್ವಾಂಸರು, ಲೇಖಕರು, ಕ್ರೀಡಾಸಕ್ತರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಗ್ರ ಚರ್ಚಿಸಿ ಸೂಕ್ತ ಸಲಹೆ ಸೂಚನೆ ನೀಡಿದರು.
ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ, ಡಿಎಸ್ಪಿ ಶಾಂತವೀರ, ತಹಶೀಲ್ದಾರ್ ಸುರೇಶ ವರ್ಮ, ತಾಪಂ ಇಓ ಚಂದ್ರಶೇಖರ ಪವಾರ, ಎಪಿಎಂಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಗ್ಯಾರಂಟಿ ಕಮೀಟಿಯ ತಾಲೂಕು ಅಧ್ಯಕ್ಷರಾದ ಪವನ ಕಿಶೋರ್ ಪಾಟೀಲ್, ಮುಖಂಡರಾದ ನಾಗೇಂದ್ರಪ್ಪ ಮಟಮಾರಿ, ಇನ್ನೀತರ ಮುಖಂಡರು, ಅಧಿಕಾರಿಗಳು ಹಾಗೂ ಕಲಾ ಬಳಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *