ಸಿಂಧನೂರು: ನಗರದ ಆರ್‌ಎಚ್ ಕಾಲೋನಿ ನಂ.4 ರಲ್ಲಿರುವ ವಿವೇಕಾನಂದ ಶಾಲೆಯಲ್ಲಿ 164ನೇ ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ 38ನೇ ಶಾಲಾ ವಾರ್ಷಿಕೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಮತ್ತು ಅದ್ದೂರಿಯಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪರಮ ಪೂಜ್ಯ ಯದ್ದಲದೊಡ್ಡಿ ಶ್ರೀಗಳು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಬಸಲಿಂಗಪ್ಪ ಬಿಇಒ, ಡಿವೈಎಸ್‌ಪಿ ಶ್ರೀ ಚಂದ್ರಶೇಖರ್, ಪಿಎಸ್ಐ ಶ್ರೀ ಮೌನೇಶ್ ರಾಥೋಡ್ ಹಾಗೂ ಶ್ರೀ ವಿನೋದ್ ಜೈನ್ ಅವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶ್ರೀ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಜೀವನ, ಆದರ್ಶಗಳು ಮತ್ತು ಯುವಜನತೆಗೆ ನೀಡಿದ ಸಂದೇಶಗಳ ಕುರಿತು ಗಣ್ಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಭಾಷಣ, ನೃತ್ಯ ಮತ್ತು ದೇಶಭಕ್ತಿಗೀತೆಗಳ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಕಳೆ ನೀಡಲಾಯಿತು.
ಅತಿಥಿಗಳು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಹಾಗೂ ಶಾಲೆಯ ಪ್ರಗತಿಯನ್ನು ಶ್ಲಾಘಿಸಿ, ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಮತ್ತು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *